
ಚಿಕ್ಕಮಗಳೂರುನಲ್ಲಿ ಭರ್ಜರಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ
ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತಯಾಚನೆ ಜೋರಾಗಿದೆ.
ಶುಕ್ರವಾರ ಸಂಜೆ ಚಿಕ್ಕಮಗಳೂರಿನ ಸಖರಾಯಪಟ್ಟಣ ಹೋಬಳಿಯ ಹುಲಿಕೆರೆ ಗ್ರಾಮದಲ್ಲಿ ಕೆ.ಜಯಪ್ರಕಾಶ್ ಹೆಗ್ಡೆ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಶಾಸಕರಾದ ತಮ್ಮಯ್ಯ ಮತ್ತು ವಿಧಾನ ಪರಿಷತ್ತಿನ ಮಾಜಿ ಸದಸ್ಯೆ ಗಾಯತ್ರಿ ಶಾಂತೆಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಸಖರಾಯಪಟ್ಟಣ ಹೋಬಳಿ ಭಾಗದ ಕಾಂಗ್ರೆಸ್ ನ ಎಲ್ಲಾ ಘಟಕದ ಅಧ್ಯಕ್ಷರುಗಳು, ಸದಸ್ಯರು, ಕಾರ್ಯಕರ್ತರು ಭಾಗವಹಿಸಿದ್ದರು.
ಇದಕ್ಕೂ ಮೊದಲು ಚಿಕ್ಕಮಗಳೂರಿನ ಸಖರಾಯಪಟ್ಟಣ ಹೋಬಳಿಯ ಚಿಕ್ಕದೇವನೂರು ಗ್ರಾಮದಲ್ಲಿ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಕೆ.ಜಯಪ್ರಕಾಶ್ ಹೆಗ್ಡೆ ಅವರ ಜೊತೆ ಶಾಸಕರಾದ ತಮ್ಮಯ್ಯ ಮತ್ತು ವಿಧಾನ ಪರಿಷತ್ತಿನ ಮಾಜಿ ಸದಸ್ಯೆ ಶ್ರೀಮತಿ ಗಾಯತ್ರಿ ಶಾಂತೆಗೌಡ ರವರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು,ಸಖರಾಯಪಟ್ಟಣ ಹೋಬಳಿ ಭಾಗದ ಕಾಂಗ್ರೆಸ್ ನ ಎಲ್ಲಾ ಘಟಕಅಧ್ಯಕ್ಷರುಗಳು, ಸದಸ್ಯರು,ಕಾರ್ಯಕರ್ತರು ಭಾಗವಹಿಸಿದ್ದರು.
ಚಿಕ್ಕಮಗಳೂರಿನ ಸಖರಾಯಪಟ್ಟಣ ಹೋಬಳಿಯ ನಿಡಘಟ್ಟ ಗ್ರಾಮದಲ್ಲಿ ಜಯಪ್ರಕಾಶ್ ಹೆಗ್ಡೆ ಚುನಾವಣೆ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಶಾಸಕರಾದ ತಮ್ಮಯ್ಯ ಮತ್ತು ವಿಧಾನ ಪರಿಷತ್ತಿನ ಮಾಜಿ ಸದಸ್ಯೆ ಗಾಯತ್ರಿ ಶಾಂತೆಗೌಡ ರವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸಖರಾಯಪಟ್ಟಣ ಹೋಬಳಿ ಭಾಗದ ಕಾಂಗ್ರೆಸ್ ನ ಎಲ್ಲಾ ಘಟಕದ ಅಧ್ಯಕ್ಷರುಗಳು, ಸದಸ್ಯರು , ಕಾರ್ಯಕರ್ತರು ಭಾಗವಹಿಸಿದ್ದರು.