ಉಡುಪಿಯ ಕೆಮ್ಮಣ್ಣುನಲ್ಲಿ ಮತಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ; ಬಾರ್ಕೂರಿನ ಕಚ್ಚೂರು ಶ್ರೀ ಮಾಲ್ತೀದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ
Tuesday, April 16, 2024
ಉಡುಪಿಯ ಕೆಮ್ಮಣ್ಣು ಸಮೀಪದ ಹಂಪನ ಕಟ್ಟೆಯಲ್ಲಿ ನಡೆದ ಮತ ಪ್ರಚಾರದ ವೇಳೆ ಉಡುಪಿ- ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕಾಂಗ್ರೆಸ್ ನ ಜಯಪ್ರಕಾಶ್ ಹೆಗ್ಡೆ ಮತಯಾಚನೆ ಮಾಡಿದರು. ಈ ವೇಳೆ ಹೆಗ್ಡೆ ಅವರು ಅಲ್ಲಿಯ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು.
ಈ ಬಾರಿಯ ಚುನಾವಣೆಯಲ್ಲಿ ತನಗೆ ಮತ ಹಾಕುವ ಮೂಲಕ ಅಭಿವೃದ್ಧಿ ಹಾಗು ಉತ್ತಮ ಆಡಳಿತಕ್ಕೆ ಕೈಜೋಡಿಸಿ ಎಂದು ಮತದಾರರಲ್ಲಿ ಬೇಡಿಕೊಂಡರು. ಈ ವೇಳೆ ಜಯಪ್ರಕಾಶ್ ಹೆಗ್ಡೆ ಅವರೊಂದಿಗೆ ಕಾಂಗ್ರೆಸ್ ಮುಖಂಡರು ಹಾಜರಿದ್ದರು.
ಇದಕ್ಕೂ ಮುನ್ನ ಬಾರ್ಕೂರಿನ ಕಚ್ಚೂರು ಶ್ರೀ ಮಾಲ್ತೀದೇವಿ ದೇವಸ್ಥಾನದಲ್ಲಿ ಜಯಪ್ರಕಾಶ್ ಹೆಗ್ಡೆ ಅವರು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಧರ್ಮದರ್ಶಿ ಗೋಕುಲ್ ದಾಸ್, ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ, ಪ್ರವೀಣ್ ಬಾರ್ಕೂರು, ಶಿವರಾಜ್ ಮಲ್ಲಾರ್ ಮೊದಲಾದವರು ಉಪಸ್ಥಿತರಿದ್ದರು.