ಉಡುಪಿ-ಚಿಕ್ಕಮಗಳೂರು ಲೋಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಜಯ ಪ್ರಕಾಶ್ ಹೆಗ್ಡೆ ಚುನಾವಣಾ ಪ್ರಚಾರದ ಮಧ್ಯೆ ಇಂದು ಸಿರಿಗೆರೆ ಶಾಖಾಮಠ ಸಾಣೆಹಳ್ಳಿ ಮಹಾಸ್ವಾಮಿಗಳಾದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಅಜ್ಜಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಯಾನಂದ್ ಹಾಗೂ ಇತರ ಗಣ್ಯರು ಹಾಜರಿದ್ದರು.