ಕೆಪಿಸಿಸಿಗೆ ಹೊಸ ಪದಾಧಿಕಾರಿಗಳ ನೇಮಕ: ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ
ಉಡುಪಿ: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಿಸಿ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.
ಇವರು ಪ್ರಸ್ತುತ ಉಡುಪಿ ಜಿಲ್ಲಾ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೆಪಿಸಿಸಿ ನೂತನ ತಂಡದ ಪದಾಧಿಕಾರಿಗಳ ಪಟ್ಟಿಯನ್ನು ಸೋಮವಾರ ಎಐಸಿಸಿ ಪ್ರಕಟಿಸಿದೆ. 43 ರಾಜ್ಯ ಉಪಾಧ್ಯಕ್ಷರು ಮತ್ತು 138 ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಹಾಗೇ ಇದರ ಜೊತೆಗೆ ಏಳು ಜಿಲ್ಲೆಗಳ ಜಿಲ್ಲಾಧ್ಯಕ್ಷರ ನೇಮಕ ಮಾಡಲಾಗಿದೆ. ಇನ್ನು ಕೆಪಿಸಿಸಿ ಖಜಾಂಚಿಯಾಗಿ ವಿನಯ್ ಕಾರ್ತಿಕ್ ಅವರನ್ನೇ ಮುಂದುವರೆಸಲಾಗಿದೆ. ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥರಾಗಿ ರಮೇಶ್ ಬಾಬು ನೇಮಕ ಮಾಡಿದ್ದರೆ, ವಿನಯ್ ಮತ್ತಿಕಟ್ಟಿ ಅವರನ್ನು ಸಾಮಾಜಿಕ ಜಾಲತಾಣ ಸಹ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
ಕೆಪಿಸಿಸಿ ನೂತನ ತಂಡ ರಚನೆ ಮಾಡಲಾಗಿದ್ದು, 43 ರಾಜ್ಯ ಉಪಾಧ್ಯಕ್ಷರು,138 ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಇದರ ಜೊತೆಗೆ ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥರಾಗಿ ರಮೇಶ್ ಬಾಬು ನೇಮಕವಾಗಿದ್ದರೆ, ಸಾಮಾಜಿಕ ಜಾಲತಾಣ ಸಹ – ಮುಖ್ಯಸ್ಥರಾಗಿ ವಿನಯ್ ಮತ್ತಿಕಟ್ಟಿ ಮತ್ತು ನಿಕೇತ್ ರಾಜ್ ಮೌರ್ಯ ಅವರನ್ನು ನೇಮಿಸಲಾಗಿದೆ. ಇನ್ನು ಕೆಪಿಸಿಸಿ ಪ್ರಚಾರ ಸಮಿತಿ ಸಹ- ಮುಖ್ಯಸ್ಥರಾಗಿ ಪಿ.ಟಿ ಪರಮೇಶ್ವರ್ ನಾಯಕ್ ಅವರನ್ನ ನೇಮಕ ಮಾಡಲಾಗಿದೆ.
ಏಳು ಜಿಲ್ಲೆಗಳ ಜಿಲ್ಲಾಧ್ಯಕ್ಷರ ನೇಮಿಸಿದ ಎಐಸಿಸಿ
ಬಳ್ಳಾರಿ ನಗರ- ಪ್ರಶಾಂತ್ ಅಲ್ಲಂ ವೀರಭದ್ರಪ್ಪ
ಬೆಂಗಳೂರು ಪೂರ್ವ – ಕೆ. ನಂದಕುಮಾರ್
ಹಾವೇರಿ – ಸಂಜೀವ್ ಕುಮಾರ್ ನೀರಲಂಗಿ
ಕೊಪ್ಪಳ – ಅಮರೇಗೌಡ ಬಯ್ಯಾಪುರ
ಉಡುಪಿ – ಕಿಶನ್ ಹೆಗ್ಡೆ
ರಾಯಚೂರು – ಬಸವರಾಜ ಇಟಗಿ
ಶಿವಮೊಗ್ಗ – ಪ್ರಸನ್ನ ಕುಮಾರ್