
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ; ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ
Wednesday, April 3, 2024
ಉಡಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.
ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿ ಬಳಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು ನಾಮಪತ್ರ ಸ್ವೀಕರಿಸಿದರು.
ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡ ಸಿ.ಟಿ.ರವಿ, ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಭೋಜೆ ಗೌಡ ಹಾಜರಿದ್ದರು.