ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರರ ಮುಖಂಡರನ್ನು, ಮೀನುಗಾರ ಮಹಿಳೆಯರನ್ನು ಭೇಟಿಯಾದ ಜಯಪ್ರಕಾಶ್ ಹೆಗ್ಡೆ; ಕಾಂಗ್ರೆಸ್ ಮುಖಂಡರೊಂದಿಗೆ ಮತಯಾಚನೆ
Wednesday, April 17, 2024
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮತಯಾಚನೆ ಮಾಡಿದರು.
ಮೀನುಗಾರರ ಮುಖಂಡರನ್ನು, ಮೀನುಗಾರ ಮಹಿಳೆಯರನ್ನು ಭೇಟಿಯಾಗಿ ಅವರ ಕಷ್ಟ ಸುಖಗಳನ್ನು ಆಲಿಸಿದ ಜಯಪ್ರಕಾಶ್ ಹೆಗ್ಡೆ, ಈ ಬಾರಿ ತನ್ನ ಗೆಲುವಿಗೆ ಸ್ಪಂದಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹೆಗ್ಡೆ ಅವರಿಗೆ ಕಾಂಗ್ರೆಸ್ ಮುಖಂಡರಾದ ಏಮ್.ಏ.ಗಫೂರ್, ಅಶೋಕ್ ಕುಮಾರ್ ಕೊಡವೂರು, ಉಡುಪಿ ನಗರ ಸಭೆ ಸದಸ್ಯ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಸೇರಿದಂತೆ ಪಕ್ಷದ ಇತರ ಗಣ್ಯರು, ಕಾರ್ಯಕರ್ತರು ಸಾಥ್ ನೀಡಿದರು.