ಕಾಂಗ್ರೆಸ್ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡಲಿದೆ ಎಂಬ ಮೋದಿ ಹೇಳಿಕೆ; ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಕಾಂಗ್ರೆಸ್ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡಲಿದೆ ಎಂಬ ಮೋದಿ ಹೇಳಿಕೆ; ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ನವದೆಹಲಿ: ರಾಜಸ್ಥಾನದ ಚುನಾವಣಾ ರ್‍ಯಾಲಿಯಲ್ಲಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡಲಿದೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ "ಸೂಕ್ತ ಕ್ರಮ" ತೆಗೆದುಕೊಳ್ಳುವಂತೆ ಕೋರಿ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಸೋಮವಾರ ದೂರು ನೀಡಿದೆ.

ಪ್ರಧಾನಿ ಮೋದಿ ಹೇಳಿಕೆ "ಒಡಕುಂಟು ಮಾಡುವ", "ದುರುದ್ದೇಶಪೂರಿತ" ಮತ್ತು ನಿರ್ದಿಷ್ಟ ಧಾರ್ಮಿಕ ಸಮುದಾಯವನ್ನು ಗುರಿಯಾಗಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ನಾಯಕರ ನಿಯೋಗವು ಇಂದು ಸಂಜೆ ಚುನಾವಣಾ ಆಯೋಗವನ್ನು ಭೇಟಿ ಮಾಡಿ, ಪ್ರಧಾನಿ ವಿರುದ್ಧ ದೂರು ನೀಡಿದೆ. ಪ್ರಧಾನಿ ಮೋದಿ ಚುನಾವಣಾ ನೀತಿ ಸಂಹಿತೆ ಮತ್ತು ಆಯೋಗದ ನಿರ್ದೇಶನಗಳನ್ನು ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಅಭಿಷೇಕ್ ಮನು ಸಿಂಘ್ವಿ ಮತ್ತು ಗುರ್ದೀಪ್ ಸಪ್ಪಲ್ ಅವರನ್ನೊಳಗೊಂಡ ಕಾಂಗ್ರೆಸ್ ನಿಯೋಗ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖ್ಬೀರ್ ಸಿಂಗ್ ಸಂಧು ಅವರನ್ನು ಭೇಟಿ ಮಾಡಿ, ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ದೂರು ಸಲ್ಲಿಸಿದೆ.

ನಿನ್ನೆ ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಜನರು ಕಷ್ಟಪಟ್ಟು ಸಂಪಾದಿಸಿದ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು "ಒಳನುಸುಳುಕೋರರು" ಮತ್ತು "ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ" ನೀಡಲು ಕಾಂಗ್ರೆಸ್ ಯೋಜಿಸಿದೆ ಎಂದು ಆರೋಪಿಸಿದ್ದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ದೇಶದ ಸಂಪತ್ತನ್ನು ಮರುಹಂಚಿಕೆ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ ಪ್ರಧಾನಿ ಮೋದಿ ಆರೋಪಿಸಿದ್ದರು.

Ads on article

Advertise in articles 1

advertising articles 2

Advertise under the article