ಉಡುಪಿ ಹಶಿಮಿ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ; ಪ್ರೀತಿ/ಶಾಂತಿ- ಮತದಾನದ ಮಹತ್ವವನ್ನು ಒತ್ತಿ ಹೇಳಿದ ಮೌಲಾನಾ ಒಬೈದುರ್ ರೆಹಮಾನ್ ನದ್ವಿ
Wednesday, April 10, 2024
ಉಡುಪಿ: ಇಲ್ಲಿನ ನಾಯರಕರೆ ಹಾಶಿಮಿ ಮಸೀದಿಯಲ್ಲಿ ಈದುಲ್ ಫಿತ್ರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಈದ್ ನಮಾಝ್ ನೇತೃತ್ವವನ್ನು ಮೌಲಾನಾ ಒಬೈದುರ್ ರೆಹಮಾನ್ ನದ್ವಿ ವಹಿಸಿ, ಮತದಾನದ ಹಕ್ಕಿನ ಮಹತ್ವವನ್ನು ಒತ್ತಿ ಹೇಳಿದರು ಮತ್ತು ಸಮುದಾಯಗಳ ನಡುವೆ ಶಾಂತಿ ಮತ್ತು ಪ್ರೀತಿಗಾಗಿ ಕರೆ ನೀಡಿದರು.
ಈದ್ ನಮಾಝ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡು ಈದ್ ಶುಭಾಶಯ ವಿನಿಮಯ ಮಾಡಿಕೊಂಡರು.