ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ NIA ತಂಡ; ರಹಸ್ಯ ಸ್ಥಳದಲ್ಲಿ ವಿಚಾರಣೆ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ NIA ತಂಡ; ರಹಸ್ಯ ಸ್ಥಳದಲ್ಲಿ ವಿಚಾರಣೆ

ಶಿವಮೊಗ್ಗ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ (NIA) ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್‌ ಎಂಬುವವರನ್ನು ರಾಷ್ಟ್ರೀಯ ತನಿಖಾ ದಳ (NIA) ವಶಕ್ಕೆ ಪಡೆದಿದ್ದು, ವಿಚಾರಣೆಗೊಳಪಡಿಸಿದೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ‌ಕಾರ್ಯಕರ್ತ ಸಾಯಿ ಪ್ರಸಾದ್‌ನನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆಗೆ ಕರೆದೊಯ್ದಿದ್ದು, ರಹಸ್ಯ ಸ್ಥಳದಲ್ಲಿ ವಿಚಾರಣೆಗೊಳಪಡಿಸಿದ್ದಾರೆ ಎಂದು ಹೇಳಲಾಗಿದೆ.

ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದರು. ತನಿಖೆ ವೇಳೆ ಇಬ್ಬರು ಮುಸ್ಲಿಂ ಯುವಕರ ಜೊತೆ ಸಾಯಿ ಪ್ರಸಾದ್ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮಾರ್ಚ್ 1ರಂದು ವೈಟ್‌ ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಐಇಡಿ ಸ್ಫೋಟದಲ್ಲಿ ಕನಿಷ್ಠ 9 ಮಂದಿ ಗಾಯಗೊಂಡಿದ್ದರು. ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ ಎನ್‌ಐಎ ಈ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿತ್ತು.

Ads on article

Advertise in articles 1

advertising articles 2

Advertise under the article