ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು: ನಟ ರಕ್ಷಿತ್ ಶೆಟ್ಟಿ

ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು: ನಟ ರಕ್ಷಿತ್ ಶೆಟ್ಟಿ

ಉಡುಪಿ: ಮುಂದಿನ ಐದು ವರ್ಷ ಯಾವ ನಾಯಕ ಅಧಿಕಾರಕ್ಕೆ ಬರಬೇಕು ಎಂದು ವೋಟ್ ಮಾಡ್ತೇನೆ. ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು ಎಂದು ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಹೇಳಿದರು.

ಉಡುಪಿ ಕುಕ್ಕಿಕಟ್ಟೆ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಐದು ವರ್ಷದಲ್ಲಿ ಏನು ಅಭಿವೃದ್ಧಿಯಾಗಿದೆ ಎಂದು ನೋಡಿ ವೋಟ್ ಹಾಕುತ್ತೇನೆ. ಯೋಚನೆ ಮಾಡಿ ರಾಜಕೀಯ ತಿಳಿದವರ ಜೊತೆ ತರ್ಕ ಮಾಡಿ ಮತ ಹಾಕುತ್ತೇನೆ. ಯಾವಾಗಲೂ ನಾನು ಒಂದು ನಿರ್ಧಾರಕ್ಕೆ ಬಂದು ಮತ ಹಾಕುತ್ತೇನೆ ಎಂದರು.

ನೆನ್ನೆ ರಾತ್ರಿ ಬೆಂಗಳೂರಿಂದ ಹೊರಟು ಉಡುಪಿಗೆ ಬಂದಿದ್ದೇನೆ. ನಾನು ಬೆಂಗಳೂರು ಸೇರಿ 18 ವರ್ಷ ಆಯ್ತು. ಪ್ರತಿ ಬಾರಿ ವೋಟಿಗೆ ನಾನು ಉಡುಪಿಗೆ ಬರುತ್ತೇನೆ. ವೋಟು ನಮ್ಮ ಹಕ್ಕು ನಮ್ಮ ಜವಾಬ್ದಾರಿ. ವೋಟ್ ಗೋಸ್ಕರ ಬೆಂಗಳೂರಿಂದ ಊರಿಗೆ ಬರುವುದು ಖುಷಿ. ನನ್ನ ಊರು ನನ್ನ ದೇಶ ನಮ್ಮ ಜವಾಬ್ದಾರಿ ಏನೋ ಖುಷಿ ಇದೆ ಎಂದರು.

Ads on article

Advertise in articles 1

advertising articles 2

Advertise under the article