ಬಿಜೆಪಿ ಯುವ ಮೋರ್ಚಾದಿಂದ "ಯುವ ಭಾರತ" ಕಾರ್ಯಕರ್ತರ ಬೃಹತ್ ಸಮಾವೇಶ; ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ
ಉಡುಪಿ: ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿಯಾಗಿ ಶನಿವಾರ ಕುಂಜಿಬೆಟ್ಟು ಶಾರಾದಾ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ "ಯುವ ಭಾರತ" ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ಪ್ರಧಾನ ಕಾರ್ಯದರ್ಶಿಗಳು, ಕಾರ್ಕಳ ಕ್ಷೇತ್ರದ ಶಾಸಕರಾದ ಸುನೀಲ್ ಕುಮಾರ್, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಹೆರ್ಗ ದಿನಕರ್ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಪ್ರಥ್ವಿರಾಜ್ ಶೆಟ್ಟಿ, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಹ ಸಂಚಾಲಕರಾದ ಕುತ್ಯಾರು ನವೀನ್ ಶೆಟ್ಟಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ರಘುಪತಿ ಭಟ್ ಹಾಗೂ ಅರುಣ್ ಕುಮಾರ್ ಪುತ್ತಿಲ ಹಾಗೂ ಪ್ರಮುಖರು ಉಪಸ್ಥಿತರಿದ್ದರು.