ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಮೃತ್ಯು; ಕೊಚ್ಚಿಹೋಗುತ್ತಿದ್ದ ಬಾಲಕಿಯನ್ನು ರಕ್ಷಿಸಲು ಹೋದವರೆಲ್ಲ ನೀರು ಪಾಲು

ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಮೃತ್ಯು; ಕೊಚ್ಚಿಹೋಗುತ್ತಿದ್ದ ಬಾಲಕಿಯನ್ನು ರಕ್ಷಿಸಲು ಹೋದವರೆಲ್ಲ ನೀರು ಪಾಲು

 

ಶಿರಸಿ: ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ನೀರುಪಾಲಾದ ಘಟನೆ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಕಾಳಿ ನದಿಯಲ್ಲಿ ನಡೆದಿದೆ.

ದಾಂಡೇಲಿ‌ ನಗರದಿಂದ 12 ಕಿ ಮೀ ದೂರದಲ್ಲಿರುವ ಜೋಯಿಡಾ ತಾಲೂಕಿನ ಅಕೋಡಾ ಗ್ರಾಮದ ಪಕ್ಕದಲ್ಲಿ ಹರಿಯುವ ಕಾಳಿ ನದಿಯಲ್ಲಿ ಈ ದುರ್ಘಟನೆ ನಡೆದಿದೆ.

ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳಾದ ನಜೀರ್ ಅಹ್ಮದ್ (40),ಅಲ್ಛೀಯಾ ಅಹ್ಮದ್ (10),ಮೋಹಿನ್ ಅಹ್ಮದ್ (6),ರೇಷಾ ಉನ್ನಿಸಾ (38),ಇಫ್ರಾ‌ಅಹ್ಮದ್ (15),ಅಬೀದ್ ಅಹ್ಮದ್ (12) ಮೃತಪಟ್ಟಿದ್ದು, ದಡದಲ್ಲಿದ್ದ ಇಬ್ಬರು ಸುರಕ್ಷಿತರಾಗಿದ್ದಾರೆ.

ಈ ಘಟನೆ ರವಿವಾರ ಸಂಜೆ ನಡೆದಿದೆ. ಈಜಾಡಲೆಂದು ನದಿಗಳಿದಿದ್ದ ಆರು ಜನರ ಪೈಕಿ ಬಾಲಕಿಯೊಬ್ಬಳು ನೀರಲ್ಲಿ ಕೊಚ್ಚಿ ಹೋಗುತ್ತಿರುವುದನ್ನು ಗಮನಿಸಿದ ಉಳಿದ ಐವರು ಆಕೆಯನ್ನು ರಕ್ಷಣೆ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ನಗರದ ಜಂಗಲ್ ಲಾಡ್ಜಸ್ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದಲ್ಲಿ ಆರು ಜನರ ಶವಗಳನ್ನು ಮೇಲಕ್ಕೆ ಎತ್ತಲಾಗಿದೆ. ದಾಂಡೇಲಿ ಗ್ರಾಮೀಣ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಗೆ ತರಲಾಗಿದೆ. ಸ್ಥಳಕ್ಕೆ ಡಿವೈಎಸ್‌ಪಿ ಶಿವಾನಂದ ಮದರಖಂಡಿ ಸಿಪಿಐ ಭಿಮಣ್ಣ ಸೂರಿ, ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

Ads on article

Advertise in articles 1

advertising articles 2

Advertise under the article