ಕಳತ್ತೂರು, ಶಿರಿಬೀಡು, ಅಂಬಲಪಾಡಿಯಲ್ಲಿ ಚುನಾವಣಾ ಪ್ರಚಾರ ನಡೆಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಳತ್ತೂರು, ಶಿರಿಬೀಡು, ಅಂಬಲಪಾಡಿಯಲ್ಲಿ ಚುನಾವಣಾ ಪ್ರಚಾರ ನಡೆಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು ವಿಧಾನಸಭಾ ಕ್ಷೇತ್ರದ ಕಳತ್ತೂರು ಭಾಗದ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಇಂದು ದಿನಾಂಕ 12-04-2024 ರಂದು ಪ್ರಭಾಕರ ಶೆಟ್ಟಿ ಅವರ ಮನೆಯಲ್ಲಿ ನಡೆಯಿತು.

ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಅವರು ಭಾಗವಹಿಸಿ ಮಾತನಾಡಿ ಭಾರತೀಯ ಜನತಾ ಪಕ್ಷ ಇಂದು ರಾಷ್ಟ್ರೀಯ ಪಕ್ಷವಾಗಿದೆ. ಇದಕ್ಕೆ ಕಾರಣ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಶ್ರಮಿಸಿದ ಬೂತ್ ಮಟ್ಟದ ಕಾರ್ಯಕರ್ತರು. ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು ನಮ್ಮ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಗೆಲ್ಲಿಸಲು ನಾವೆಲ್ಲರೂ ಶ್ರಮಿಸಬೇಕು ಎಂದರು.ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ರಘುಪತಿ ಭಟ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಸುಮಾ ಶೆಟ್ಟಿ, ಕಾಪು ಮಂಡಲ ಬಿಜೆಪಿ ಉಪಾಧ್ಯಕ್ಷರಾದ ಲತಾ ಆಚಾರ್ಯ, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಮರುಳಿಧರ್ ಪೈ, ಶಿರ್ವ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಗಳಾದ ಸುಶಾಂತ್ ಶೆಟ್ಟಿ, ಕುತ್ಯಾರು ಶಕ್ತಿ ಕೇಂದ್ರದ ಗಣೇಶ್ ಶೆಟ್ಟಿ, ಬೂತ್ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ, ಶಶಿಕಾಂತ್ ಹಾಗೂ ಕುತ್ಯಾರು ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಶಿರಿಬೀಡು ವಾರ್ಡ್ ಕಾರ್ಯಕರ್ತರ ಸಭೆ - ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಪೂರ್ವಭಾವಿಯಾಗಿ ಇಂದು ದಿನಾಂಕ 12-04-2024 ರಂದು ನಡೆದ ಉಡುಪಿ ವಿಧಾನಸಭಾ ಕ್ಷೇತ್ರದ ಶಿರಿಬೀಡು ವಾರ್ಡ್ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. 


ಶಾಸಕರು ಮಾತನಾಡಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಸರಳ ಸಜ್ಜನಿಕೇಯ ರಾಜಕಾರಣಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿ ನರೇಂದ್ರ ಮೋದಿಯವರ ಕೈ ಬಲಪಡಿಸೋಣ ಎಂದರು.

ಸಭೆಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರ ಬಿಜೆಪಿ ಮಂಡಲ ಅಧ್ಯಕ್ಷರಾದ ದಿನೇಶ್ ಅಮೀನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಸುಪ್ರಸಾದ್ ಶೆಟ್ಟಿ, ಶಿರಿಬೀಡು ವಾರ್ಡಿನ ನಗರಸಭಾ ಸದಸ್ಯರಾದ ಟಿ.ಜಿ ಹೆಗ್ಡೆ, ಗಿರೀಶ್ ಅಂಚನ್, ನಗರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಕಾರ್ಯಕರ್ತರು ಉಪಸ್ಥಿತರಿದ್ದರು.

ಅಂಬಲಪಾಡಿ ವಾರ್ಡ್ ಕಾರ್ಯಕರ್ತರ ಸಭೆ - ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಪೂರ್ವಭಾವಿಯಾಗಿ ಇಂದು ದಿನಾಂಕ 12-04-2024 ರಂದು ನಡೆದ ಉಡುಪಿ ವಿಧಾನಸಭಾ ಕ್ಷೇತ್ರದ ಅಂಬಲಪಾಡಿ ವಾರ್ಡ್ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. 


ಶಾಸಕರು ಮಾತನಾಡಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ದಾಖಲೆ ಮತಗಳ ಅಂತರದಿಂದ ಗೆಲ್ಲಿಸಲು ನಾವೆಲ್ಲರೂ ಕಟಿಬದ್ಧರಾಗೋಣ ಎಂದರು.

ಸಭೆಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಉಡುಪಿ ನಗರ ಬಿಜೆಪಿ ಮಂಡಲ ಅಧ್ಯಕ್ಷರಾದ ದಿನೇಶ್ ಅಮೀನ್, ಅಂಬಲಪಾಡಿ ವಾರ್ಡಿನ ನಗರಸಭಾ ಸದಸ್ಯರಾದ ಹರೀಶ್ ಶೆಟ್ಟಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article