ಬಿಜೆಪಿಯ ತೇಜಸ್ವಿ ಸೂರ್ಯ ಮತ್ತೊಮ್ಮೆ "ಎಮರ್ಜೆನ್ಸಿ ಎಕ್ಸಿಟ್ ಡೋರ್" ಮೂಲಕ ಜನರಿಂದ ಎಸ್ಕೇಪ್! ಕಾಂಗ್ರೆಸ್ ಲೇವಡಿ; ಬ್ಯಾಂಕ್ ಹಣ ಕಳಕೊಂಡಿದ್ದವರ ಪ್ರಶ್ನೆಗೆ ಸಿಟ್ಟಾಗಿ ಹೊರನಡೆದ ತೇಜಸ್ವಿ ಸೂರ್ಯ: ವಿಡಿಯೋ ಭಾರೀ ವೈರಲ್
ಬೆಂಗಳೂರು: ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆ ಹಾಗೂ ಕೋಮುದ್ವೇಷ ಹರಡುವುದರಲ್ಲೇ ಕುಖ್ಯಾತಿ ಗಳಿಸಿಕೊಂಡಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಇದೀಗ ಮತ್ತೊಂದು ಕಾರಣಕ್ಕೆ ಈಗ ಸುದ್ದಿಯಾಗಿದ್ದಾರೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಏಪ್ರಿಲ್ 13ರಂದು ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಹಗರಣದಿಂದಾಗಿ ಠೇವಣಿ ಕಳೆದುಕೊಂಡಿದ್ದ ಸಂತ್ರಸ್ತರ ಸಭೆಯನ್ನು ಕರೆಯಲಾಗಿತ್ತು. ಈ ವೇಳೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಭಾಗವಹಿಸಿದ್ದರು. ಈ ಸಭೆಯಲ್ಲಿ ಠೇವಣಿದಾರರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ತೇಜಸ್ವಿ ಸೂರ್ಯ ಸಿಟ್ಟಿಗೆದ್ದು ಹೊರನಡೆದ ಘಟನೆ ನಡೆದಿದೆ. ಏಪ್ರಿಲ್ 13ರ ಘಟನೆಯ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲಾಗಿದೆ.
ಲೋಕಸಭಾ ಚುನಾವಣಾ ಹಿನ್ನೆಲೆ ಏಪ್ರಿಲ್ 13ರಂದು ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್‌ಗಳ ಠೇವಣಿದಾರರ ಸಭೆಯನ್ನು ಕರೆದಿದ್ದು, ಈ ವೇಳೆ ಸಂಸದ ತೇಜಸ್ವಿ ಸೂರ್ಯ ಹಾಗೂ ಠೇವಣಿದಾರರ ನಡುವೆ ಗದ್ದಲವುಂಟಾಗಿದೆ.
"ಎಮರ್ಜೆನ್ಸಿ ಎಕ್ಸಿಟ್ ಡೋರ್" ಮೂಲಕ ಮತ್ತೊಮ್ಮೆ ಎಸ್ಕೇಪ್: ಕಾಂಗ್ರೆಸ್ ವ್ಯಂಗ್ಯ
ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಯ ತೇಜಸ್ವಿ ಸೂರ್ಯ ಮತ್ತೊಮ್ಮೆ "ಎಮರ್ಜೆನ್ಸಿ ಎಕ್ಸಿಟ್ ಡೋರ್" ಮೂಲಕ ಜನರಿಂದ ಎಸ್ಕೇಪ್ ಆಗಿದ್ದಾರೆಂದು ವ್ಯಂಗ್ಯವಾಡಿದೆ.
ಬೆಂಗಳೂರು ದಕ್ಷಿಣದ ಸಂಸದ 5 ವರ್ಷದುದ್ದಕ್ಕೂ ದೋಸೆ ತಿಂದುಕೊಂಡು, ಫುಟ್ ಬಾಲ್ ಆಡಿಕೊಂಡು, ಮೋಜು ಮಾಡಿಕೊಂಡು ಕಾಲ ಕಳೆದಿದ್ದರು, ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಹಣ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಯನ್ನು ಒಂದು ದಿನವೂ ಆಲಿಸದ ತೇಜಸ್ವಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚುನಾವಣೆಯ ಸಮಯದಲ್ಲಿ ಮತದಾರರ ಮೇಲೆಯೇ ಹಲ್ಲೆ, ನಿಂದನೆ ಮಾಡಲು ಮುಂದಾಗುವ ತೇಜಸ್ವಿ ಸೂರ್ಯನ ಪಟಾಲಂನ ದುರಹಂಕಾರ ಮಿತಿ ಮೀರಿದೆ, ಮತದಾರರು ಈ ಅಹಂಗೆ ಪಾಠ ಕಲಿಸುವ ಸಮಯ ಬಂದಿದೆ. ಎಲ್ಲಾ ಕಡೆಯೂ ಮತದಾರರಿಂದ ಬಿಜೆಪಿ ಅಭ್ಯರ್ಥಿಗಳು ಗೋಬ್ಯಾಕ್ ಎದುರಿಸುತ್ತಿದ್ದಾರೆ, ಈ ಜನಾಕ್ರೋಶಕ್ಕೆ ಬಿಜೆಪಿ ದೂಳಿಪಟ ಮಾಡುವುದು ನಿಶ್ಚಿತ ಎಂದು ಹೇಳಿದೆ.