ನಾಮಪತ್ರ ವಾಪಸ್ ಪಡೆದ ದಿಂಗಾಲೇಶ್ವರ ಸ್ವಾಮೀಜಿ!
Monday, April 22, 2024
ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಹ್ಲಾದ್ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್ ಪಡೆದಿದ್ದಾರೆ.
ಸ್ವಾಮೀಜಿ ಪರ ನಾಮಪತ್ರ ವಾಪಸ್ ಪಡೆಯಲು ಬಂದಿದ್ದ ಸಚಿನ್ ಪಾಟೀಲ್ ಪ್ರತಿಕ್ರಿಯಿಸಿ, ಸ್ವಾಮೀಜಿ ಅವರ ನಾಮಪತ್ರ ವಾಪಸ್ ಪಡೆದಿದ್ದೇವೆ. ದಿಂಗಾಲೇಶ್ವರ ಸ್ವಾಮೀಜಿ ಅವರ ಆದೇಶದಂತೆ ನಾಮಪತ್ರ ಹಿಂದಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.
ದಿಂಗಾಲೇಶ್ವರ ಶ್ರೀಗಳ ನಾಮಪತ್ರ ವಾಪಸ್ ಪಡೆಯುವಲ್ಲಿ ಉಸ್ತುವಾರಿ ಸಚಿವ ಸಂತೋಷ ಲಾಡ್ ಯಶಸ್ವಿಯಾಗಿದ್ದಾರೆ. ಸೋಮವಾರ ಬೆಳಗಿನ ಜಾವ ನಾಲ್ಕು ಗಂಟೆಯವರೆಗೂ ಹುಬ್ಬಳ್ಳಿ ಖಾಸಗಿ ಹೋಟೆಲಿನಲ್ಲಿ ವಚನಾನಂದ ಶ್ರೀಗಳ ಮಧ್ಯಸ್ಥಿಕೆಯಲ್ಲಿ ಮನವೊಲಿಸುವ ಕಾರ್ಯ ನಡೆದಿತ್ತು.
ದಿಂಗಾಲೇಶ್ವರ ಶ್ರೀ ಕಣದಿಂದ ಹಿಂದಕ್ಕೆ ಸರಿದ ಕಾರಣ ಧಾರವಾಡದಲ್ಲಿ ಪ್ರಹ್ಲಾದ್ ಜೋಶಿ ಹಾಗೂ ವಿನೋದ್ ಅಸೂಟಿ ನಡುವೆ ನೇರ ಹಣಾಹಣಿ ನಡೆಯಲಿದೆ.