ತರಿಕೆರೆ ಸುತ್ತಮುತ್ತ ಬಿರುಸಿನ ಪ್ರಚಾರ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ
Sunday, April 21, 2024
ಚಿಕ್ಕಮಗಳೂರಿನಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿರುವ ಉಡುಪಿ-ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ, ತರಿಕೆರೆ ಸುತ್ತಮುತ್ತ ಮತಯಾಚನೆ ನಡೆಸಿದರು.
ರವಿವಾರ ತರಿಕೆರೆಯ ಲಕ್ಕವಳ್ಳಿಯ ಶ್ರೀ ಹನುಮಂತ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ, ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ, ಮುಡುಗೋಡುವಿನಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ತೆರಳಿ ಮತಯಾಚನೆ ನಡೆಸಿದರು.