
ರಮದಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು
Monday, April 1, 2024
ತೀರ್ಥಹಳ್ಳಿ: ರಮದಾನ್ ಉಪವಾಸ ವೃತ ಮುಗಿಸಿ ಈಜಲು ಹೋಗಿದ್ದ ಮೂವರು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ತೀರ್ಥಹಳ್ಳಿ ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.
ಮೃತ ಬಾಲಕರನ್ನು ರಫನ್, ಇಯನ್ ಹಾಗು ಅರ್ಷದ್ ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ರಾಮ ಮಂಟಪದ ಪಕ್ಕ ಈ ಘಟನೆ ನಡೆದಿದೆ. ಮೂವರು ಬಾಲಕರು ರಮದಾನ್ ಉಪವಾಸ ತೊರೆದು ನಂತರ ಈಜುವುದಕ್ಕೆ ರಾಮ ಮಂಟಪದ ಪಕ್ಕ ತುಂಗಾ ನದಿಗೆ ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿದ್ದು ಸಾವನ್ನಪ್ಪಿದ್ದಾರೆ. ನೀರಿನಲ್ಲಿ ಸತತ ಅಗ್ನಿಶಾಮಕದಳದವರು ಹಾಗು ಸ್ಥಳೀಯರು ಸೇರಿ ಹುಡುಕಾಟ ನಡೆಸಿದ್ದು, ಕೊನೆಗೆ ಮೂವರ ಶವ ಪತ್ತೆಯಾಗಿದೆ. ಸತತವಾಗಿ ಒಂದು ಘಂಟೆಯಿಂದ ತುಂಗಾ ನದಿಯ ತೀರದಲ್ಲಿ ಅಗ್ನಿ ಶಾಮಕ ದಳ ಮತ್ತು ಪೊಲೀಸರು ಹುಡುಕಾಟ ನಡೆಸಿ ಮೃತದೇಹ ಹೊರ ತೆಗೆದಿದ್ದಾರೆ.