ಗರ್ಭಿಣಿ ಪತ್ನಿಯನ್ನು ಮಂಚಕ್ಕೆ ಕಟ್ಟಿ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪತಿ!
ಅಮೃತಸರ: ಪತಿಯೊಬ್ಬ ತನ್ನ ಗರ್ಭಿಣಿ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಮೃತಸರದಲ್ಲಿ ನಡೆದಿದೆ. 23 ವರ್ಷದ ಮಹಿಳೆ 6 ತಿಂಗಳ ಗರ್ಭಿಣಿಯಾಗಿದ್ದು ಹೊಟ್ಟೆಯಲ್ಲಿ ಅವಳಿ ಮಕ್ಕಳಿದ್ದವು. ಪಾಪಿ ಪತಿಯೊಬ್ಬ ಆಕೆಯನ್ನು ಮಂಚಕ್ಕೆ ಕಟ್ಟಿ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಆರೋಪಿ ಪತಿ ಪರಾರಿಯಾಗಿದ್ದಾನೆ. ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿ ಆತನನ್ನು ಪತ್ತೆ ಮಾಡಿದ್ದಾರೆ.
ಶುಕ್ರವಾರ ಪತಿ-ಪತ್ನಿ ನಡುವೆ ಯಾವುದೋ ವಿಚಾರಕ್ಕೆ ಜಗಳವಾಗಿತ್ತು. ಈ ವೇಳೆ ಕೋಪಗೊಂಡ ಪತಿ ಸುಖದೇವ್ ತನ್ನ ಪತ್ನಿ ಪಿಂಕಿಯನ್ನು ಮಂಚಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದಾನೆ. ಬೆಂಕಿ ಹಚ್ಚಿದ ಬಳಿಕ ಆರೋಪಿ ಸುಖದೇವ್ ಅಲ್ಲಿಂದ ಪರಾರಿಯಾಗಿದ್ದಾನೆ. ಸುಖದೇವ್ ಮತ್ತು ಪಿಂಕಿ ಎರಡೂವರೆ ವರ್ಷಗಳ ಹಿಂದೆ ಮದುವೆಯಾಗಿದ್ದರು.
ಪತಿ-ಪತ್ನಿಯ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಸುಖದೇವ್ ಹಾಗೂ ಪಿಂಕಿ ನಡುವೆ ಆಗಾಗ ಜಗಳ ನಡೆಯುತ್ತಲೇ ಇತ್ತು. ಶುಕ್ರವಾರವೂ ಕೆಲವು ವಿಷಯದ ಬಗ್ಗೆ ಜಗಳ ನಡೆದಿದ್ದು, ಆರೋಪಿ ಸುಖದೇವ್ ಪಿಂಕಿಯನ್ನು ಹತ್ಯೆ ಮಾಡಲು ನಿರ್ಧರಿಸಿದ್ದ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಆರೋಪಿ ಸುಖದೇವ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಈ ಘಟನೆಯನ್ನು ರಾಷ್ಟ್ರೀಯ ಮಹಿಳಾ ಆಯೋಗ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಖಂಡಿಸಿದೆ. ಇದರೊಂದಿಗೆ ಪಂಜಾಬ್ ಪೊಲೀಸರಿಂದ ಪ್ರಕರಣದ ಸಂಪೂರ್ಣ ವರದಿಯನ್ನು ಕೇಳಿದೆ.
ಘಟನೆಯ ನಂತರ ಪರಾರಿಯಾಗಿದ್ದ ಸುಖದೇವ್ ನನ್ನು ನಿನ್ನೆ ಸಂಜೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.