
ಸರಳ ಸಜ್ಜನಿಕೆಯ ಕೋಟ ಶ್ರೀನಿವಾಸ ಪೂಜಾರಿಯನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಿ ಮೋದಿಯನ್ನು ಮತ್ತೆ ಪ್ರಧಾನಿ ಮಾಡುವ: ಎರ್ಮಾಳು ತೆಂಕ ಶಕ್ತಿ ಕೇಂದ್ರ ಸಭೆಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಕಾಪು: ಎರ್ಮಾಳು ತೆಂಕ ಶಕ್ತಿ ಕೇಂದ್ರದ ಸಭೆ ಮಂಗಳವಾರ ಸತೀಶ್ ಸಾಲ್ಯಾನ್ ಅವರ ಮನೆಯಲ್ಲಿ ನಡೆಯಿತು. ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಭಾಗವಹಿಸಿದರು.
ಶಾಸಕರು ಮಾತನಾಡಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಸರಳ ಸಜ್ಜನಿಕೇಯ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಿ ನರೇಂದ್ರ ಮೋದಿ ಅವರ ಸಂಕಲ್ಪದಂತೆ 400ಕ್ಕೂ ಮೀರಿ ಕ್ಷೇತ್ರಗಳಲ್ಲಿ ಗೆದ್ದು ಮಗದೊಮ್ಮೆ ಮೋದಿಯವರನ್ನು ಪ್ರಧಾನಮಂತ್ರಿಯನ್ನಾಗಿಸೋಣ ಎಂದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ವಕ್ತಾರರಾದ ಎಸ್.ಕೆ ನವೀನ್, ಎಸ್ ಕೆ, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಮರುಳಿಧರ್ ಪೈ, ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಎಲ್ಲದಡಿ, ತೆಂಕ ಶಕ್ತಿ ಕೇಂದ್ರದ ಸಂಚಾಲಕರಾದ ಕೇಶವ ಮೋಯ್ಲಿ, ತೆಂಕ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.