ಲೋಕಸಭಾ ಚುನಾವಣೆ; ಎ. 24ರಂದು ಉಡುಪಿಗೆ ಯೋಗಿ ಆದಿತ್ಯನಾಥ್
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರ ಪ್ರಚಾರಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹಿತ ಹಲವು ರಾಜ್ಯ ಮತ್ತು ರಾಷ್ಟ್ರ ನಾಯಕರ ಆಗಮಿಸಲಿದ್ದಾರೆ.
ಎ. 19ರಂದು ಉಪ್ಪೂರಿಗೆ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಹಾಗೂ ಸಂಸದೆ ಸುಮಲತಾ, ಎ. 20ರಂದು ಉಡುಪಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಎ. 21ರಂದು ಕಾಪುವಿಗೆ ಸಂಸದ ಪ್ರತಾಪ್ ಸಿಂಹ, ಎ. 22ರಂದು ಹಿರಿಯಡಕಕ್ಕೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಹಾಗೂ ಎ. 24ರಂದು ಉಡುಪಿ ನಗರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಲಿದ್ದಾರೆ ಎಂದು ಎಂದು ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಯೋಗಿ ಅವರ ಕಾರ್ಯಕ್ರಮವನ್ನು ದೊಡ್ಡಮಟ್ಟದಲ್ಲಿ ನಡೆಸಲು ಬಿಜೆಪಿ ಚಿಂತನೆ ನಡೆಸಿದ್ದು, ಉಡುಪಿ ನಗರದಲ್ಲಿ ರೋಡ್‌ಶೋ ಅಥವಾ ಬೃಹತ್ ಸಮಾವೇಶಕ್ಕೆ ರೂಪರೇಖೆ ಸಿದ್ಧಪಡಿಸಲಾಗುತ್ತಿದೆ ಎಂದರು.