ಡಾ.ವಿ.ಎಸ್. ಆಚಾರ್ಯ ನಿವಾಸಕ್ಕೆ ಭೇಟಿ ನೀಡಿ ಶಾಂತ ವಿ. ಆಚಾರ್ಯ ಅವರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ

ಡಾ.ವಿ.ಎಸ್. ಆಚಾರ್ಯ ನಿವಾಸಕ್ಕೆ ಭೇಟಿ ನೀಡಿ ಶಾಂತ ವಿ. ಆಚಾರ್ಯ ಅವರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಅವರು ಮಾಜಿ ಗೃಹ ಸಚಿವ ಕೀರ್ತಿಶೇಷ ಡಾ! ವಿ.ಎಸ್. ಆಚಾರ್ಯರವರ ಮನೆಗೆ ಭೇಟಿ ನೀಡಿ, ಡಾ! ವಿ.ಎಸ್. ಆಚಾರ್ಯರವರ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಡಾ! ಆಚಾರ್ಯರವರ ಧರ್ಮಪತ್ನಿ ಶಾಂತ ವಿ. ಆಚಾರ್ಯರವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವಾರಾಜ್, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಾಧ್ಯಮ ಪ್ರಮುಖ್ ಗಿರೀಶ್ ಎಮ್. ಅಂಚನ್, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್, ನಿಕಟಪೂರ್ವ ಅಧ್ಯಕ್ಷ ದಾವೂದ್ ಅಬೂಬಕರ್ ಮತ್ತಿತರರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article