ಮೂಳೂರು ಅಲ್ ಇಹ್ಸಾನ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ
Saturday, May 11, 2024
ಕಾಪು: ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಡಿ.ಕೆ.ಎಸ್.ಸಿ ಅಧೀನ ಸಂಸ್ಥೆ ಮೂಳೂರು ಅಲ್ ಇಹ್ಸಾನ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಶೇ.100 ಫಲಿತಾಂಶ ದಾಖಲಿಸಿದೆ.
ಸಂಸ್ಥೆಯ 117 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 15 ಮಂದಿ ಉನ್ನತ ದರ್ಜೆ, 84 ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರ ಪೈಕಿ ಅಫ್ಶೀನ್ ಆಯಿಷಾ 625ರಲ್ಲಿ 606 ಅಂಕ ಗಳಿಸುವ ಮೂಲಕ ಶಾಲೆಗೆ ಪ್ರಥಮ ಸ್ಥಾನಿಯಾಗಿ ಮೂಡಿಬಂದಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಅಲ್ ಹಾಜ್ ಅಸ್ಸಯ್ಯಿದ್ ಕೆ.ಎಸ್. ಆಟಕೋಯ ತಂಞಳ್ ಕುಂಬೋಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.