ಉಡುಪಿ: ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ಬಿಜೆಪಿಯ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ!
Thursday, May 23, 2024
ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಬಿಜೆಪಿಯ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ.
ಶಿಸ್ತು ಸಮಿತಿಯ ಮುಂದೆ ಬಂಡಾಯ ಸ್ಪರ್ಧೆಗೆ ಸಂಬಂಧಿಸಿದಂತೆ ಎರಡು ದಿನಗಳ ಒಳಗಾಗಿ ಸ್ಪಷ್ಟೀಕರಣ ನೀಡಬೇಕೆಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ನೋಟಿಸ್ ನಲ್ಲಿ ತಿಳಿಸಿದ್ದಾರೆ.
ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಂಡಾಯವಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ವಿರುದ್ಧ ಶಿಸ್ತು ಕ್ರಮ ಜರಗಿಸುವಂತೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ರಾಜ್ಯ ಘಟಕಕ್ಕೆ ಮನವಿ ಮಾಡಲಾಗಿತ್ತು. ಅದರಂತೆ ನೋಟಿಸ್ ಜಾರಿ ಮಾಡಲಾಗಿದೆ.