
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಜನರು ಭಯದಲ್ಲಿ ಬದುಕುತ್ತಿದ್ದಾರೆ; ರಾಜ್ಯ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು: ಉದಯಕುಮಾರ್ ಶೆಟ್ಟಿ ಆಗ್ರಹ
Thursday, May 16, 2024
ಉಡುಪಿ: ಕಳೆದ 11 ತಿಂಗಳಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪದೇ ಪದೇ ಮಹಿಳೆಯರ ಮೇಲೆ ದೌರ್ಜನ್ಯ, ಹಲ್ಲೆ, ಹತ್ಯೆ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ ಸರಕಾರವು ಜನರನ್ನು ಭಯದ ವಾತಾವರಣದಲ್ಲಿ ಬದುಕುವ ಸ್ಥಿತಿಗೆ ತಲುಪಿಸಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ ಆರೋಪಿಸಿದರು.
ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆಗೆ ರಕ್ಷಣೆ ಕೊಡುವುದರಲ್ಲಿಯೂ ಸರಕಾರ ವಿಫಲವಾಗಿದೆ. ನೇಹಾ ಹತ್ಯೆಯ ನೆನಪು ಮಾಸುವ ಮುನ್ನ ಅದೇ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ ಮತ್ತೆ ಅಂಜಲಿ ಅಂಬಿಗೇರ ಎಂಬ ಯುವತಿಯ ಕೊಲೆಯಾಗಿದೆ. ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅಸಮರ್ಥರಾದ ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ಬಿಜೆಪಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಶಿವಕುಮಾರ್ ಅಂಬಲಪಾಡಿ, ವಿಜಯಕುಮಾರ್ ಉದ್ಯಾವರ ಉಪಸ್ಥಿತರಿದ್ದರು.