ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ಕಳೆದ ಸಾಲಿನಲ್ಲಿ 18ನೇ ಸ್ಥಾನ ಪಡೆದಿದ್ದ ಉಡುಪಿ ಜಿಲ್ಲೆ ಈ ಬಾರಿ 94% ಫಲಿತಾಂಶದೊಂದಿಗೆ ಪ್ರಥಮ ಸ್ಥಾನದಲ್ಲಿದೆ.
ಕಾರ್ಕಳ ತಾಲೂಕು ಕುಕ್ಕುಂದೂರಿನ ಜ್ಞಾನಸುಧಾ ಪ್ರೌಢಶಾಲೆಯ ವಿದ್ಯಾರ್ಥಿನಿ ಸಹನಾ 623 ಅಂಕ ಪಡೆದು ರಾಜ್ಯಕ್ಕೆ ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.