ಶಾಸಕ ಹರೀಶ್ ಪೂಂಜ ವಿರುದ್ಧ ಪೊಲೀಸರು ಕೈಗೊಂಡ ಕ್ರಮದ ಬಗ್ಗೆ ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು...?

ಶಾಸಕ ಹರೀಶ್ ಪೂಂಜ ವಿರುದ್ಧ ಪೊಲೀಸರು ಕೈಗೊಂಡ ಕ್ರಮದ ಬಗ್ಗೆ ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು...?

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಪೊಲೀಸರು ಕೈಗೊಂಡ ಕ್ರಮವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಸಮರ್ಥಿಸಿಕೊಂಡಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದ್ದಾರೆ.

ಶಾಸಕ ಪೂಂಜ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೆರುತ್ತಿದೆ ಎಂಬ ಬಿಜೆಪಿ ಮುಖಂಡರ ಆರೋಪದ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ''ಒತ್ತಡ ಎಂದರೆ ಏನು. ಶಾಸಕನಾದವನು ಪೊಲೀಸರ ವಿರುದ್ಧ ಗಲಾಟೆ ಮಾಡಬಹುದಾ. ಅವರು ಗಲಾಟೆ ಮಾಡಿದ್ದು ಯಾರ ಪರವಾಗಿ. ಕಾನೂನು ಎಲ್ಲ ರಿಗೂ ಒಂದೇ ಅಲ್ಲವೇ' ಎಂದರು.

ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ಅನ್ನು ದಾಖಲಿಸಲಾಗಿದ್ದು, ಅದರಂತೆ ಕ್ರಮ‌ ಆಗಲಿದೆ. ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲು ಶಿಕ್ಷೆ ನೀಡುವ ಅವಕಾಶವಿದೆ. ಆದರೆ ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವೇ?

ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಹರೀಶ್ ಪೂಂಜ ಅವರ ಮೇಲೆ ದಾಖಲಾಗಿದೆ. ಒಂದರಲ್ಲಿ ಸ್ಟೇಷನ್ ಬೇಲ್ ಸಿಕ್ಕಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ? ಕಾನೂನು ಹಾಗೆ ಹೇಳುತ್ತದೆಯಾ? ಎಂದು ಅವರು ಪ್ರಶ್ನಿದರು.

Ads on article

Advertise in articles 1

advertising articles 2

Advertise under the article