ಬಿಜೆಪಿ ಡಾ.ಸರ್ಜಿ- ಭೋಜೇಗೌಡ ಪರ ಬಂಟಕಲ್ಲು-ಉದ್ಯಾವರದಲ್ಲಿ ಮತಯಾಚನೆ ಮಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಕಾಪು: ಬಂಟಕಲ್ಲು ಶ್ರೀ ಮದ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಸಂಸ್ಥೆಗೆ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಭೋಜೇಗೌಡ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಾತ್ಯತೀತ ಜನತಾ ದಳದ (ಜೆಡಿಎಸ್) ಜಿಲ್ಲಾಧ್ಯಕ್ಷರಾದ ಯೋಗೀಶ್, ನೈರುತ್ಯ ಪದವೀಧರ ಕ್ಷೇತ್ರದ ಸಹ ಸಂಚಾಲಕರಾದ ಶಿಲ್ಪಾ ಜಿ ಸುವರ್ಣ, ಶಿಕ್ಷಕರ ಕ್ಷೇತ್ರದ ಸಹ ಸಂಚಾಲಕರಾದ ವೀಣಾ ಎಸ್ ಶೆಟ್ಟಿ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯರಾದ ಶ್ಯಾಮಲ ಕುಂದರ್, ರಾಜ್ಯ ಬಿಜೆಪಿ ಮಾಜಿ ಉಪಾಧ್ಯಕ್ಷರಾದ ನಯನ ಗಣೇಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ ಉಪಸ್ಥಿತರಿದ್ದರು.
ಉದ್ಯಾವರ ಎಸ್.ಡಿ.ಎಂ ಆಯುರ್ವೇದ ಕಾಲೇಜು-ಆಸ್ಪತ್ರೆ
ಉದ್ಯಾವರ ಎಸ್.ಡಿ.ಎಂ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಗೆ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಭೋಜೇಗೌಡ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಾತ್ಯತೀತ ಜನತಾ ದಳದ (ಜೆಡಿಎಸ್) ಜಿಲ್ಲಾಧ್ಯಕ್ಷರಾದ ಯೋಗೀಶ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ನೈರುತ್ಯ ಪದವೀಧರ ಕ್ಷೇತ್ರದ ಸಹ ಸಂಚಾಲಕರಾದ ಶಿಲ್ಪಾ ಜಿ ಸುವರ್ಣ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯರಾದ ಶ್ಯಾಮಲ ಕುಂದರ್, ರಾಜ್ಯ ಬಿಜೆಪಿ ಮಾಜಿ ಉಪಾಧ್ಯಕ್ಷರಾದ ನಯನ ಗಣೇಶ್, ಪ್ರಾಂಶುಪಾಲರಾದ ಮಮತಾ ಕೆ.ವಿ ಉಪಸ್ಥಿತರಿದ್ದರು.