ಪೊಲೀಸರಿಗೆ ಬೆದರಿಕೆ ಆರೋಪ: BJP ಶಾಸಕ ಹರೀಶ್‌ ಪೂಂಜ ವಿರುದ್ಧ ಪ್ರಕರಣ ದಾಖಲು

ಪೊಲೀಸರಿಗೆ ಬೆದರಿಕೆ ಆರೋಪ: BJP ಶಾಸಕ ಹರೀಶ್‌ ಪೂಂಜ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಪೊಲೀಸರಿಗೆ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಅಕ್ರಮ ಕಲ್ಲು ಕ್ವಾರಿ ಹಾಗೂ ಸ್ಪೋಟ ಚಟುವಟಿಕೆ ಕೇಸ್ ನಲ್ಲಿ ರೌಡಿ ಶೀಟರ್ ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಬಂಧಿಸಿದ ವೇಳೆ ಠಾಣೆಗೆ ಬಂದ ಶಾಸಕರು, ತಮ್ಮ ಪಕ್ಷದ ಕಾರ್ಯಕರ್ತನಾದ ಶಶಿರಾಜ್ ಶೆಟ್ಟಿಯನ್ನು ಕಾನೂನುಬಾಹಿರವಾಗಿ ಬಿಡುಗಡೆ ಮಾಡುವಂತೆ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಆರೋಪಿಯನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೊಲೀಸ್ ಠಾಣೆ ನಿಮ್ಮಪ್ಪಂದಾ ಅಂತಾ PSI ಮುರಳೀಧರ್ ನಾಯ್ಕ್‌ಗೆ ಧಮ್ಕಿ ಕೂಡ ಹಾಕಿದ್ದಾರೆ. ಹೀಗಾಗಿ ಐಪಿಸಿ ಸೆಕ್ಷನ್‌ 353, 504ರಡಿ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಬೆಳ್ತಂಗಡಿಯ ಮೆಲಂತಬೆಟ್ಟುವಿನಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಕ್ವಾರಿ ಮೇಲೆ ತಹಶೀಲ್ದಾರ್‌ ನೇತೃತ್ವದಲ್ಲಿ ಪೊಲೀಸರ ತಂಡದಿಂದ ದಾಳಿ ಮಾಡಿದೆ. ಈ ಸಂಬಂಧ ಯುವ ಮೋರ್ಚಾದ ತಾಲೂಕು ಅಧ್ಯಕ್ಷ, ರೌಡಿಶೀಟರ್ ಶಶಿರಾಜ್ ಶೆಟ್ಟಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಶಾಸಕ ಹರೀಶ್ ಪೂಂಜ ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಐಪಿಸಿ ಕಲಂ 353,504ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆ ಕಳಂಜೆದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದ ವೇಳೆ ಅದನ್ನು ತಡೆದ ಘಟನೆ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ಅವರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು.


Ads on article

Advertise in articles 1

advertising articles 2

Advertise under the article