ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ಮಾಡಿ ಮಹಿಳೆ ಅಪಹರಣ ಪ್ರಕರಣದಲ್ಲಿ ಸಿಲುಕಿಸಲಾಗಿದೆ: ಹೆಚ್. ಡಿ. ರೇವಣ್ಣ

ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ಮಾಡಿ ಮಹಿಳೆ ಅಪಹರಣ ಪ್ರಕರಣದಲ್ಲಿ ಸಿಲುಕಿಸಲಾಗಿದೆ: ಹೆಚ್. ಡಿ. ರೇವಣ್ಣ


ಬೆಂಗಳೂರು: ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ಮಾಡಿ ಮಹಿಳೆ ಅಪಹರಣ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಎಸ್ ಐಟಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹೆಚ್. ಡಿ. ರೇವಣ್ಣ ಆರೋಪಿಸಿದ್ದಾರೆ.

ಬೌರಿಂಗ್ ಆಸ್ಪತ್ರೆಯಲ್ಲಿ ರವಿವಾರ ವೈದ್ಯಕೀಯ ತಪಾಸಣೆಗೆ ಒಳಗಾಗುವ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ.ಆದಾಗ್ಯೂ ರಾಜಕೀಯ ಷಡ್ಯಂತ್ರದಿಂದ ದುರುದ್ದೇಶದಿಂದ ಬಂಧಿಸಲಾಗಿದೆ ಎಂದು ಕಿಡಿಕಾರಿದರು.

ಏಪ್ರಿಲ್ 28ಕ್ಕೆ ನನ್ನ ವಿರುದ್ಧ ಎಫ್ಐಆರ್ ದಾಖಲಿಸಿದ್ರು, ಆದರೆ ನನ್ನ ವಿರುದ್ಧ ಯಾವುದೇ ಪುರಾವೆ ಸಿಗಲಿಲ್ಲ. ಹಾಗಾಗೀ ಮೇ2 ರಂದು ಮತ್ತೊಂದು ಕೇಸ್ ಹಾಕಿಸಿ ಬಂಧಿಸಿದ್ದಾರೆ. ರಾಜಕೀಯ ದುರುದ್ದೇಶದಿಂದ ರಾಜಕೀಯ ಇತಿಹಾಸದಲ್ಲೇ ಇದು ದೊಡ್ಡ ಷಡ್ಯಂತ್ರವಾಗಿದೆ. ಇದನ್ನು ಎದುರಿಸುವ ಶಕ್ತಿಯಿದೆ. ಎಲ್ಲಾವನ್ನೂ ಜಡ್ಜ್ ಮುಂದೆ ಹೇಳುವುದಾಗಿ ತಿಳಿಸಿದರು.

ಬಳಿಕ ಆಸ್ಪತ್ರೆಯಲ್ಲಿ ರೇವಣ್ಣ ಅವರಿಗೆ ಆಸ್ಪತ್ರೆಯಲ್ಲಿ ರಕ್ತದೊತ್ತಡ, ಸಕ್ಕರೆ ಪ್ರಮಾಣ, ಇಸಿಜಿ ಮತ್ತಿತರ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಬಳಿಕ ಆಸ್ಪತ್ರೆಯಿಂದ ಕೋರಮಂಗಲದಲ್ಲಿರುವ ಜಡ್ಜ್ ನಿವಾಸಕ್ಕೆ ಎಸ್ ಐಟಿ ಅಧಿಕಾರಿಗಳು ಕರೆದೊಯ್ದರು.

Ads on article

Advertise in articles 1

advertising articles 2

Advertise under the article