''ಪೆನ್ ಡ್ರೈವ್ ಗ್ಯಾಂಗ್'' ಎಂದು 4 ಸಚಿವರ ಹೆಸರನ್ನು ಬಹಿರಂಗಗೊಳಿಸಿದ ಜೆಡಿಎಸ್! ಹೊಸ ಬಾಂಬ್‌ ಸಿಡಿಸಿದ ದೇವರಾಜೇಗೌಡ ಹೇಳಿದ್ದೇನು...?

''ಪೆನ್ ಡ್ರೈವ್ ಗ್ಯಾಂಗ್'' ಎಂದು 4 ಸಚಿವರ ಹೆಸರನ್ನು ಬಹಿರಂಗಗೊಳಿಸಿದ ಜೆಡಿಎಸ್! ಹೊಸ ಬಾಂಬ್‌ ಸಿಡಿಸಿದ ದೇವರಾಜೇಗೌಡ ಹೇಳಿದ್ದೇನು...?

ಬೆಂಗಳೂರು: ರಾಜ್ಯದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ದೇವರಾಜೇಗೌಡ ಆರೋಪದ ಬೆನ್ನಲ್ಲೇ ''ಪೆನ್ ಡ್ರೈವ್ ಗ್ಯಾಂಗ್'' ಎಂದು 4 ಸಚಿವರ ಹೆಸರುಗಳನ್ನು ಜೆಡಿಎಸ್ ಬಹಿರಂಗಗೊಳಿಸಿದೆ.

ಬಿಜೆಪಿ ನಾಯಕ ದೇವರಾಜೇಗೌಡ ಆರೋಪದ ಬೆನ್ನಲ್ಲೇ ಜೆಡಿಎಸ್​ ಟ್ವೀಟ್ ಮಾಡಿದ್ದು, ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದು ನಾಲ್ವರು ಸಚಿವರುಗಳ ಹೆಸರುಗಳನ್ನು ಬಹಿರಂಗಪಡಿಸಿದೆ.

ಟ್ವೀಟ್ ನಲ್ಲಿ, '1.ಡಿಸಿಎಂ ಡಿ.ಕೆ.ಶಿವಕುಮಾರ್ , 2.ಕೃಷಿ ಸಚಿವ ಚೆಲುವರಾಯಸ್ವಾಮಿ, 3.ಕಂದಾಯ ಸಚಿವ ಕೃಷ್ಣಭೈರೇಗೌಡ, 4. IT BT ಸಚಿವ ಪ್ರಿಯಾಂಕ್ ಖರ್ಗೆ ಪ್ಲಸ್ ಇನ್ನೂ ಒಬ್ಬ ಸಚಿವ ಹಾಗೇ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ. ಇವರೆಲ್ಲರೂ ಹೂಡಿರುವ ಸಂಚು ಏನ್ ಗೊತ್ತಾ?

ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವುದು. ಈ ಸಂಚು ಸಾಕಾರಗೊಳಿಸಲು CD ಶಿವಕುಮಾರ್ ಸಾಹೇಬರು ವಕೀಲರಾದ ದೇವರಾಜೇಗೌಡರಿಗೆ ಆಫರ್ ಮಾಡಿದ ಮೊತ್ತ ಬರೋಬ್ಬರಿ 100 ಕೋಟಿ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದೆ.

ಹೊಸ ಬಾಂಬ್‌ ಸಿಡಿಸಿದ ದೇವರಾಜೇಗೌಡ...

ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ವಕೀಲ ದೇವರಾಜೇಗೌಡ (Devarajegowda) ಹೊಸ ಬಾಂಬ್‌ ಸಿಡಿಸಿದ್ದಾರೆ. ಪೆನ್‌ಡ್ರೈವ್‌ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್‌. ಹ್ಯಾಂಡಲ್​ ಮಾಡಲು ನಾಲ್ವರು ಸಚಿವರ ಸಮಿತಿ ರಚಿಸಿದ್ದರು. ಅಲ್ಲದೇ ಪೆನ್​ಡ್ರೈವ್​ ಹಂಚಿಕೆ ಮಾಡಿದ್ದು ಕುಮಾರಸ್ವಾಮಿ ಎಂದು ಹೇಳಲು ನನಗೆ 100 ಕೋಟಿ ಆಫರ್​ ನೀಡಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.

ದೇವರಾಜೇಗೌಡ ಹೇಳಿದ್ದು ಹೀಗೆ.....

ಕಾರ್ತಿಕ್ ಕರೆಸಿಕೊಂಡು ಸಂಪೂರ್ಣ ಮಾಹಿತಿ ಪಡೆದು ಪೆನ್‌ಡ್ರೈವ್ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್. ನಾಲ್ಕು ಜನ ಮಂತ್ರಿಗಳ ಕಮಿಟಿ ಮಾಡಿದ್ದರು. ಚೆಲುವರಾಯಸ್ವಾಮಿ, ಕೃಷ್ಣಭೈರೇಗೌಡ, ಪ್ರೀಯಾಂಕ ಖರ್ಗೆ ಮತ್ತು ಇನ್ನೊಬ್ಬ ಸಚಿವರು. ನಾಲ್ಕು ಮಂತ್ರಿಗಳ ತಂಡ ರಚನೆ ಮಾಡಿ ಇದನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ದರು.ಅಲ್ಲದೇ ಡಿಕೆ ಶಿವಕುಮಾರ್​ 100 ಕೋಟಿ ರೂ. ಆಫರ್ ಕೊಟ್ಟಿದ್ದಾರೆ. ಮೊದಲಿಗೆ ಡಿಕೆ ಶಿವಕುಮಾರ್ ಅವರು ನನ್ನನ್ನು ಕರೆಸಿ ಮಾತನಾಡಿದ್ದರು.

ಪೆನ್‌ಡ್ರೈವ್‌ ಅನ್ನು ಕುಮಾರಸ್ವಾಮಿ ಹಂಚಿದ್ರು ಎಂದು ಹೇಳು ನಿನಗೆ ಸಮಸ್ಯೆ ಆಗಲ್ಲ ಸೆಕ್ಯೂರ್ ಮಾಡುತ್ತೇನೆ ಎಂದು ಹೇಳಿದ್ದರು. ಇದಕ್ಕೆ ದೊಡ್ಡಮಟ್ಟದ 100 ಕೋಟಿ ಹಣದ ಆಫರ್ ಕೊಟ್ಟರು. ಈ ಪೈಕಿ ಐದು ಕೋಟಿ ರೂಪಾಯಿ ಅಡ್ವಾನ್ಸ್ ದುಡ್ಡನ್ನ ಬೌರಿಂಗ್ ಕ್ಲಬ್‌ನ 110 ರೂಂಗೆ ಕಳುಹಿಸಿದ್ದರು ಎಂದು ದೇವರಾಜೇ ಗೌಡ ಆರೋಪಿಸಿದ್ದಾರೆ.

ಅಂತೆಯೇ ಚನ್ನರಾಯಪಟ್ಟಣ ಮಾಜಿ ವಿಧಾನಪರಿಷತ್ ಸದಸ್ಯ ಗೋಪಾಲಸ್ವಾಮಿ ಅವರನ್ನು ಐದು ಕೋಟಿ ಕ್ಯಾಶ್ ಕೊಟ್ಟು ಸಂಧಾನಕ್ಕೆ ಕಳುಹಿಸಿದ್ದರು. ಆದ್ರೆ, ಇದಕ್ಕೆ ನಾನು ಒಪ್ಪದೇ ಇದ್ದಾಗ ಈಗಾಗಲೇ ದೊಡ್ಡ ಹಗರಣ ಆಗಿರುವುದರಿಂದ ಮೋದಿಗೆ, ಬಿಜೆಪಿಗೆ, ಕುಮಾರಸ್ವಾಮಿಗೆ ಕೆಟ್ಟ ಹೆಸರು ತರಲು ಸಂಚು ಮಾಡಿದ್ರು ಎಂದಿದ್ದಾರೆ.

Ads on article

Advertise in articles 1

advertising articles 2

Advertise under the article