ಮೋದಿ ಆಡಳಿತ ನೀತಿ ಜಾತಿ, ಮತ, ಧರ್ಮ ಆಧಾರದಲ್ಲಿ ಕಾರ್ಮಿಕರನ್ನು ಎತ್ತಿ ಕಟ್ಟಿ ಕೋಮುವಾದದ ಅಡಿಯಾಳಾಗಿ ಮಾಡುತ್ತಿದೆ: ಸುರೇಶ್ ಕಲ್ಲಾಗರ

ಮೋದಿ ಆಡಳಿತ ನೀತಿ ಜಾತಿ, ಮತ, ಧರ್ಮ ಆಧಾರದಲ್ಲಿ ಕಾರ್ಮಿಕರನ್ನು ಎತ್ತಿ ಕಟ್ಟಿ ಕೋಮುವಾದದ ಅಡಿಯಾಳಾಗಿ ಮಾಡುತ್ತಿದೆ: ಸುರೇಶ್ ಕಲ್ಲಾಗರ

ಉಡುಪಿ: ಕಾರ್ಪೋರೇಟ್ ಹಾಗೂ ಕೋಮುವಾದ ಮೈತ್ರಿಯಿಂದ ಕಾರ್ಮಿಕರನ್ನು ಬಂಡವಾಳಗಾರರು ಗುಲಾಮರಾಗಿ ಮಾಡಿ ಗುಲಾಮಗಿರಿಗೆ ತಳ್ಳುತ್ತಿದ್ದಾರೆ. ಮಾತ್ರವಲ್ಲ  ಜಾತಿ, ಮತ, ಧರ್ಮ ಆಧಾರದಲ್ಲಿ ಕಾರ್ಮಿಕರನ್ನು ಎತ್ತಿ ಕಟ್ಟಿ ಕೋಮುವಾದದ ಅಡಿಯಾಳಾಗಿ ಮಾಡುವ ಬಿಜೆಪಿ ಅಪಾಯಕಾರಿ ನೀತಿಯ ವಿರುದ್ಧ ರೈತರು ಕಾರ್ಮಿಕರು ಕೂಲಿಕಾರರು ನೌಕರರು ಒಗ್ಗೂಡಿ ಹೋರಾಟ ಮಾಡಬೇಕು ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು.



ಉಡುಪಿ ಅಜ್ಜರಕಾಡು ಹುತಾತ್ಮ ಚೌಕದಲ್ಲಿ ಇಂದು ಆಯೋಜಿಸಿದ ಮೇ ದಿನಾಚರಣೆ ಬಹಿರಂಗ ಸಭೆಯಲ್ಲಿ ಮಾತನಾಡಿದರು.

ಕೊರೊನಾ ಸಂಕಷ್ಟದ ದಿನಗಳಲ್ಲಿ ಕೇಂದ್ರ ಸರ್ಕಾರದ ಮಂತ್ರಿಮಂಡಲದಲ್ಲಿ 44 ಕಾರ್ಮಿಕ ಕಾನೂನುಗಳನ್ನು ರದ್ದು ಮಾಡಿ 4 ಸಂಹಿತೆ ತಂದು ಸೌಲಭ್ಯಗಳನ್ನು ಕಸಿದು ಕೊಳ್ಳಲಾಗಿದೆ. ಕನಿಷ್ಠ ವೇತನ ರೂ 31000/- ನೀಡಲು ಕಾರ್ಮಿಕ ವರ್ಗ ಹೋರಾಟ ನಡೆಸುತ್ತಿದ್ದಾರೆ. ಆದರೆ ಮೋದಿಯವರು ತಳಮಟ್ಟದ ಕನಿಷ್ಠ ವೇತನ ರೂ 178/- ಕಾನೂನುಬದ್ಧ ಗೊಳಿಸಿರುವುದು ಕಾರ್ಮಿಕ ವರ್ಗದ ಬಗ್ಗೆ ಬಿಜೆಪಿ ಅನುಸರಿಸುತ್ತಿರುವ ಕಾರ್ಮಿಕ ವಿರೋಧಿ ಜನವಿರೋಧಿ ನೀತಿಗೆ ಸಾಕ್ಷಿಯಾಗಿದೆ ಎಂದರು.

ಪ್ರಗತಿಪರ ಚಿಂತಕರಾದ ಪ್ರೊಫೆಸರ್ ಫಣಿರಾಜ್ ಮಾತನಾಡಿ, ಕಾರ್ಮಿಕರು ತಮ್ಮ ಹಕ್ಕುಗಳ ರಕ್ಷಣೆಗಾಗಿ ರಾಜಕೀಯ ಮಾಡಬೇಕಾಗಿದೆ. ದೇಶದ ಸಂಪತ್ತು ಸೃಷ್ಠಿ ಮಾಡುವವರಿಗೆ ದೇಶದ ಸಂಪತ್ತು ಸಿಗಬೇಕಾಗಿದೆ. ಅಂತಹ ಅರಿವು ಪಡೆದಾಗ ಕಾರ್ಮಿಕರು ಮೇ ದಿನದ ಮಹತ್ವ ಮೂಡಲು ಸಾಧ್ಯ ಎಂದು ಹೇಳಿದರು.

ಮೇ ದಿನಾಚರಣೆ ಸಭೆಯ ಅಧ್ಯಕ್ಷತೆಯನ್ನು ಸಿಐಟಿಯು  ಮುಖಂಡರಾದ ಶೇಖರ ಬಂಗೇರ ವಹಿಸಿ ಮಾತನಾಡಿದರು.

ಸಭೆಗೂ ಮೊದಲು ಹಳೆ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ಅಜ್ಜರಕಾಡು ಹುತಾತ್ಮ ಸ್ಮಾರಕದ ವರೆಗೆ ಮೆರವಣಿಗೆ ನಡೆಸಲಾಯಿತು. 

ಸಭೆಯಲ್ಲಿ ವಿಮಾ ನೌಕರರ ಸಂಘದ ಉಡುಪಿ ವಿಭಾಗ ಕಾರ್ಯದರ್ಶಿ ಪ್ರಭಾಕರ್ ಕುಂದರ್, AIBEA ಕಾರ್ಯದರ್ಶಿ ನಾಗೇಶ್ ನಾಯಕ್, AITUC ಮುಖಂಡರಾದ  ಶಿವನಂದ, INTUC ಜಿಲ್ಲಾ ಅಧ್ಯಕ್ಷರಾದ ಕಿರಣ್ ಹೆಗ್ಡೆ ಉಪಸ್ಥಿತರಿದ್ದರು.

ಸಿಐಟಿಯು ಉಡುಪಿ ವಲಯ ಸಂಚಾಲಕರಾದ ಕವಿರಾಜ್. ಎಸ್ ಕಾಂಚನ್ ಸ್ವಾಗತ ಮಾಡಿ ಕಾರ್ಯಕ್ರಮ ನಿರೂಪಣೆ ಮಾಡಿದರು.ಕಟ್ಟಡ ಸಂಘದ ಜಿಲ್ಲಾ ಕಾರ್ಯದರ್ಶಿ ಶಶಿಧರ ಗೊಲ್ಲ ವಂದನಾರ್ಪಣೆ ಮಾಡಿದರು.

Ads on article

Advertise in articles 1

advertising articles 2

Advertise under the article