ಬಂಟ್ವಾಳದ ನಾವೂರುನಲ್ಲಿ ಪೋಷಕರ ಮುಂದೆಯೇ ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರ ಮೃತ್ಯು
Sunday, May 5, 2024
ಬಂಟ್ವಾಳ: ಬಂಟ್ವಾಳದ ನಾವೂರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ರವಿವಾರ ಸಂಜೆ ಮೃತಪಟ್ಟಿದ್ದಾರೆ.
ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ, ಅಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ಮರಿಯಮ್ಮ ನಾಶಿಯಾ (14 ) ಮೃತ ಬಾಲಕಿಯರು.
ಮೂಲತಃ ನಾವೂರು ನಿವಾಸಿ ಆಗಿರುವ ಇಲಿಯಾಸ್ ಅವರು ಉಳ್ಳಾಲದಲ್ಲಿ ವಾಸವಾಗಿದ್ದು, ಇಲ್ಲಿನ ನಾವೂರು ಸಮೀಪದ ಮೈಂದಾಳದಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಮನೆಯವರೊಂದಿಗೆ ರವಿವಾರ ಸಂಜೆ ಮಕ್ಕಳು ಸ್ಥಳೀಯ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿ ಆಟವಾಡುತ್ತಿದ್ದರು. ಇದೇ ವೇಳೆ ಮಕ್ಕಳು ನೀರಿನಲ್ಲಿ ಮುಳುಗುವುದನ್ನು ಕಣ್ಣಾರೆ ಕಂಡರೂ ಈಜು ಬಾರದ ಪೋಷಕರು ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ