ಭಯೋತ್ಪಾದಕರನ್ನು ಹಿಡಿದು ತಂದಾಗಲೂ ನೀವು ಪೊಲೀಸ್ ಠಾಣೆಗೆ ನುಗ್ತೀರಾ? ಶಾಸಕ ಹರೀಶ್ ಪೂಂಜಾರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೈಕೋರ್ಟ್; ಮತ್ತೇನು ಹೇಳಿತು ನೋಡಿ...
ಬೆಂಗಳೂರು: ಪೊಲೀಸರು ಭಯೋತ್ಪಾದಕರನ್ನು ಹಿಡಿದು ತಂದಾಗಲೂ ನೀವು ಪೊಲೀಸ್ ಠಾಣೆಗೆ ನುಗ್ತೀರಾ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಪರವಾನಿಗೆ ಪಡೆಯದೆ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಗಳ ಅಕ್ರಮ ದಾಸ್ತಾನು ಮಾಡಿದ್ದ ವ್ಯಕ್ತಿಯ ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕ್ರಮಕ್ಕೆ ಹೈಕೊರ್ಟ್ ಗರಂ ಆಗಿದೆ.
ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಲ್ಲಿ ನಿಂಧಿಸಿದ ಹಾಗೂ ಪ್ರತಿಭಟನೆ ಮೂಲಕ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ದಾಖಲಾಗಿದ್ದ ಎರಡು ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಧೀಕ್ಷಿತ್ ಅವರಿದ್ದ ನ್ಯಾಯಪೀಠ, ಶಾಸಕರ ಕ್ರಮಕ್ಕೆ ತೀವ್ರ ಅಸಮಾದಾನ ವ್ಯಕ್ತಪಡಿಸಿತು.
ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಬಹುದು. ಅಕ್ರಮ ಬಂಧನ ಮಾಡಿದಲ್ಲಿ ಹೆಬಿಯಾಸ್ ಕಾರ್ಪಸ್ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ಆದರೆ, ಜನ ಪ್ರತಿನಿಧಿ ಎಂಬ ಕಾರಣಕ್ಕೆ ಠಾಣೆ ಮುಂದೆ ಹೋಗಿ ಪ್ರತಿಭಟನೆ ನಡೆಸುವುದು ಎಷ್ಟು ಸರಿ ?, ಅಲ್ಲದೆ, ಶಾಸಕರು ಕಾನೂನು ಮಾಡುವ ಕೆಲಸವನ್ನು ಮಾಡಬೇಕು. ಅದರ ಬದಲಾಗಿ ನ್ಯಾಯಾಲಯದ ಕೆಲಸದಲ್ಲಿ ಮಾಡುವುದಕ್ಕೆ ಮುಂದಾಗುವದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರಿದ್ದಾರೆ, ನ್ಯಾಯಾಲಯದ ಕಾರ್ಯವನ್ನು ನೀವು ಮಾಡುವುದಕ್ಕೆ ಮುಂದಾಗಬೇಡಿ. ನಿಮ್ಮ ಕೆಲಸ ಕಾನೂನು ಮಾಡುವುದನ್ನು ಮಾಡಿ, ನ್ಯಾಯಾಲಯ ತನ್ನ ಕಾರ್ಯ ಕಾಡುವುದಕ್ಕೆ ಬಿಡಿ ಎಂದು ಪೀಠ ಸಲಹೆ ನೀಡಿತು.
ಮುಂದೊಂದು ದಿನ ನ್ಯಾಯಾಧೀಶರು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ನಮ್ಮ ಹಿಂದೆ ಬಂದು ಕೂತರೆ ನಾವೆಲ್ಲರೂ ಹೆಗೆ ಕೆಲಸ ಮಾಡಬೇಕು. ಈ ರೀತಿಯ ವರ್ತನೆಯನ್ನು ಸಹಿಸಲಾಗುವುದಿಲ್ಲ ಎಂದು ಪೀಠ ತಿಳಿಸಿತು.
ಪ್ರಸ್ತುತ ದಿನಗಳಲ್ಲಿ ಪೊಲೀಸ್‌ರ ವಿರುದ್ಧ ಧರಣಿ ಮಾಡುವುದು, ಕಲ್ಲು ಎಸೆಯುವುದು, ಕರ್ತವ್ಯಕ್ಕೆ ಅಡ್ಡಿಪಡಿಸುವುದು ಸಾಮಾನ್ಯವಾಗಿದೆ. ಯಾವುದೋ ಒಂದು ಪ್ರಕರಣದಲ್ಲಿ ಪೊಲೀಸರಿಂದ ಒಬ್ಬರಿಗೆ ತೊಂದರೆ ಆಗಬಹುದು. ಆದರೆ, ಪೊಲೀಸರನ್ನು ನಾವು ರಕ್ಷಣೆ ಮಾಡಬೇಕಾಗಿದೆ. ಇಲ್ಲವಾದಲ್ಲಿ ಅವರು ಸೆವೆ ಸಲ್ಲಿಸುವುದಾದರೂ ಹೇಗೆ ಎಂದು ಪೀಠ ಇದೇ ವೆಳೆ ಪ್ರಶ್ನೆ ಮಾಡಿತು.
ಜನ ಪ್ರತಿನಿಧಯಾದ ವ್ಯಕ್ತಿ ಯಾವುದೋ ವ್ಯಕ್ತಿಯನ್ನು ಬಂಧಿಸಿದಲ್ಲಿ ಪೊಲೀಸ್ ಠಾಣೆಗೆ ಹೋಗುವುದು ಎಷ್ಟು ಸರಿ. ಭಯೋತ್ಪಾದಕನನ್ನು ಪೊಲೀಸರು ಬಂಧಿಸುತ್ತಾರೆ. ಅವನ ಪತ್ನಿ ಬಂದು ನನ್ನ ಪತಿ ಅತ್ಯುತ್ತಮ ವ್ಯಕ್ತಿಯಾಗಿದ್ದಾರೆ. ಅವರನ್ನು ಪೊಲೀಸರು ಬಂದಿಸಿದ್ದಾರೆ ಎಂದರೆ ತಕ್ಷಣ ಜನ ಪ್ರತಿನಿಧಿ ಪೊಲೀಸ್ ಠಾಣೆಗೆ ಹೋಗಲು ಸಾಧ್ಯವೇ, ಅರ್ಜಿದಾರರು ನೀವು ಠಾಣೆಗೆ ಹೋಗಬಾರದಾಗಿತ್ತು ಎಂದು ತಿಳಿಸಿತು,
ಯಾವುದೇ ವ್ಯಕ್ತಿಯನ್ನು ಬಂಧಿಸಿದಲ್ಲಿ ಅದನ್ನು ಕಾನೂನು ಪ್ರಕಾರ ಪ್ರಕ್ರಿಯೆ ನಡೆಸಬೇಕು. ಅದಕ್ಕೆ ಬದಲಾಗಿ ಶಾಸಕರಾದವರು ಠಾಣೆಗೆ ಹೋದರೆ ಪೊಲೀಸರು ತಮ್ಮ ಸೇವೆ ಸಲ್ಲಿಸುವುದಾದರೂ ಹೇಗೆ? ಎಂದು ಪ್ರಶ್ನಿಸಿತು.
ಈ ರೀತಿಯ ಪ್ರಕರಣದಲ್ಲಿ ಯಾವುದೇ ನ್ಯಾಯಾಲಯ ಆರೋಪಿತರ ಪರವಾಗಿ ಆದೇಶಿಸಿರುವ ಭಾರತದ ಯಾವುದೇ ನ್ಯಾಯಾಲಯದ, ವಿದೇಶ ನ್ಯಾಯಾಲಯಗಳು ಒಂದೇ ಒಂದು ಆದೇಶ ನೀಡಿರುವ ಉದಾಹರಣೆ ಇದಿಯೇ? ಇದ್ದರೆ ಸಲ್ಲಿಸಿ ಅಧರ ಆಧಾರದಲ್ಲಿ ಮುಂದಿನ ವಿಚಾರಣೆ ನಡೆಸಿ ಆದೇಶಿಸಲಾಗುವುದು ಎಂದು ಪೀಠ ತಿಳಿಸಿತು.
ವಾದ ಆಲಿಸಿದ ಪೀಠ, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು. ಅಲ್ಲದೆ, ಮುಂದಿನ ವಿಚಾರಣೆಯವರೆ ಸಾವಧಾನದಿಂದ ಇರಿ. ಅರ್ಜಿದಾರರಿಗೆ ಯಾವುದೇ ತೊಂದರೆ ಮಾಡುವುದಕ್ಕೆ ಮುಂದಾಗಬೇಡಿ ಎಂದು ಸೂಚಿಸಿ ವಿಚಾರಣೆ ಮುಂದೂಡಿತು.
ವಿಚಾರಣಾ ವೇಳೆ ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಪ್ರಭುಲಿಂಗ ನಾವಡಗಿ, ಬಿಜೆಪಿ ಯುವ ಮೋರ್ಚಾದ ಶಶಿರಾಜ್ ಶೆಟ್ಟಿ ಅವರನ್ನು ಪೊಲೀಸರು ಅಕ್ರಮ ಗಣಿಗಾರಿಗೆ ಆರೋಪದಲ್ಲಿ ಬಂಧಿಸಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಈ ಸಂಬಂಧ ಬಂಧಿತನ ಪತ್ನಿ ಅರ್ಜಿದಾರರಿಗೆ ಕರೆ ಮಾಡಿ ವಿಷಯವನ್ನು ತಿಳಿಸಿದರು. ತಕ್ಷಣ ಬೆಳ್ತಂಗಡಿ ಠಾಣೆಗೆ ಬಂದ ಅರ್ಜಿದಾರರು ರಾತ್ರಿ 11.30ಕ್ಕೆ ಭೇಟಿ ನೀಡಿ ಯಾವ ಕಾರಣಕ್ಕೆ ಎಫ್‌ಐಆರ್ ಆಗಿದೆ ಎಂದು ಪ್ರಶ್ನಿಸಿದರು. ಸೂಕ್ತ ರೀತಿಯ ಉತ್ತರ ನೀಡಿರಲಿಲ್ಲ. ಕಾರಣದ ಧ್ವನಿಯನ್ನು ಜೋರು ಮಾಡಿ ಮಾತನಾಡಿದ್ದರು.
ಪ್ರಕರಣದ ಹಿನ್ನೆಲೆ
ಅರ್ಜಿದಾರರು ಪಕ್ಷದ ಕಾರ್ಯಕರ್ತ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ಆರೋಪದಲ್ಲಿ ಶಶಿರಾಜ್ ಶೆಟ್ಟಿಯನ್ನು ಬಂಧಿಸಿದ್ದರು. ಇದರಿಂದ ಸಿಟ್ಟಾಗಿದ್ದ ಅರ್ಜಿದಾರರು ಠಾಣೆಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ವಿರುದ್ಧ ಅವಾಚ್ಯವಾಗಿ ಬೈದು ಬೆದರಿಕೆ ಒಡ್ಡಿzದ್ದರು. ಅಲ್ಲದೆ, ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಜತೆಗೆ, ಪ್ರತಿಭಟನೆ ನಡೆಸಿದ್ದರು.
ಈ ಆರೋಪದಲ್ಲಿ ಎರಡು ಎಫ್‌ಐಆರ್‌ಗಳನ್ನು ಪೊಲೀಸರು ದಾಖಲಿಸಿದ್ದರು. ಇದನ್ನು ಪ್ರಶ್ನಿಸಿ ಹರೀಶ್ ಪೂಂಜಾ ಹೈಕೋರ್ಟ್ ಮೆಟ್ಟಿಲೆರಿದ್ದರು.