ಬೆಂಗಳೂರಿನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ!
Thursday, May 16, 2024
ಬೆಂಗಳೂರು: ಯುವತಿ ಅನುಮಾನಾಸ್ಪದವಾಗಿ ಮನೆಯಲ್ಲೇ ಸಾವನ್ನಪ್ಪಿದ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಭುಧ್ಯಾ(21) ಸಾವನ್ನಪ್ಪಿರುವ ಯುವತಿ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾ ಶವ ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಪ್ರಭುಧ್ಯಾ ತನ್ನ ತಾಯಿ ಮತ್ತು ಸಹೋದರನೊಂದಿಗೆ ವಾಸವಾಗಿದ್ದಳು. ಬುಧವಾರ ಸಂಜೆ ಸುಬ್ರಹ್ಮಣ್ಯಪುರದ ತನ್ನ ಮನೆಯ ಸ್ನಾನಗೃಹದಲ್ಲಿ ಕತ್ತು ಮತ್ತು ಮಣಿಕಟ್ಟು ಸೀಳಿದ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ಸಂಜೆ 7 ಗಂಟೆ ಸುಮಾರಿಗೆ ಘಟನೆ ಬೆಳಕಿಗೆ ಬಂದಿದೆ. ಪಿಯುಸಿ ವಿದ್ಯಾರ್ಥಿನಿ ಅತಿಯಾದ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಈ ಕುರಿತು ಮಾಹಿತಿ ನೀಡಿದ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ ಜಗಲಾಸರ್ ಘಟನೆಯ ಎಲ್ಲಾ ಆಯಾಮಗಳನ್ನು ಒಳಗೊಂಡ ತನಿಖೆ ಮುಂದುವರೆದಿದೆ ಎಂದು ತಿಳಿಸಿದರು.