ಅಶ್ಲೀಲ ವೀಡಿಯೊಗಳ ಪೆನ್ ಡ್ರೈವ್ ಪ್ರಕರಣ; ದಿಢೀರ್ ಪ್ರತ್ಯಕ್ಷರಾದ ಆರೋಪಿ ಪ್ರಜ್ವಲ್ ರೇವಣ್ಣ; ಪ್ರಕರಣದ ಬಗ್ಗೆ ಹೇಳಿದ್ದೇನು...?

ಅಶ್ಲೀಲ ವೀಡಿಯೊಗಳ ಪೆನ್ ಡ್ರೈವ್ ಪ್ರಕರಣ; ದಿಢೀರ್ ಪ್ರತ್ಯಕ್ಷರಾದ ಆರೋಪಿ ಪ್ರಜ್ವಲ್ ರೇವಣ್ಣ; ಪ್ರಕರಣದ ಬಗ್ಗೆ ಹೇಳಿದ್ದೇನು...?

ಬೆಂಗಳೂರು: ಅಶ್ಲೀಲ ವೀಡಿಯೊಗಳ ಪೆನ್ ಡ್ರೈವ್ ಪ್ರಕರಣ ದೇಶಾದ್ಯಂತ ಭಾರೀ ಸುದ್ದಿ ಮಾಡುತ್ತಿರುವ ಮಧ್ಯೆ ಇದೀಗ ಎಸ್​ಐಟಿ ನೋಟಿಸ್​ಗೆ ಪ್ರಕರಣ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ದಿಢೀರ್ ಪ್ರತ್ಯಕ್ಷರಾಗಿದ್ದಾರೆ.

ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲ. ಆದ ಕಾರಣ ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಜ್ವಲ್ ರೇವಣ್ಣ ಬರೆದುಕೊಂಡಿದ್ದಾರೆ.

ಈ ಬಗ್ಗೆ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರುವ ಪ್ರಜ್ವಲ್ ರೇವಣ್ಣ, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲ. ಆದ ಕಾರಣ ನನ್ನ ವಕೀಲರ ಮೂಲಕ ಸಿ.ಐ.ಡಿ ಬೆಂಗಳೂರು ಅವರಿಗೆ ತಿಳಿಸಿದ್ದೇನೆ. ಸತ್ಯ ಶೀಘ್ರದಲ್ಲೇ ಮೇಲುಗೈ ಸಾಧಿಸುತ್ತದೆ ಎಂದು ಬರೆದುಕೊಂಡಿದ್ದಾರೆ. ವಿಡಿಯೋ ವೈರಲ್ ಹಾಗೂ ಪ್ರಕರಣ ದಾಖಲಾದ ಬಳಿಕ ಪ್ರಜ್ವಲ್ ರೇವಣ್ಣ ಆವರದ್ದು ಇದು ಮೊದಲ ಪ್ರತಿಕ್ರಿಯೆಯಾಗಿದೆ. 

ಪ್ರಜ್ವಲ್​ ರೇವಣ್ಣ ಪರ ವಕೀಲ ಹೇಳಿದ್ದೇನು?

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಪರ ವಕೀಲ ಜಿ.ಅರುಣ್ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಹೊಳೆನರಸೀಪುರದ ಮನೆ ಬಾಗಿಲಿಗೆ ನೋಟಿಸ್ ಅಂಟಿಸಿದ್ದಾರೆ. ಪ್ರಜ್ವಲ್​ ವಿದೇಶದಲ್ಲಿರುವುದರಿಂದ ಕಾಲಾವಕಾಶ ಕೇಳಿದ್ದಾರೆ. ಪ್ರಜ್ವಲ್ ಪರವಾಗಿ ನಾನು ಎಸ್​ಐಟಿಗೆ ಕಾಲಾವಕಾಶ ಕೇಳಿದ್ದೇನೆ. ಇಂದು (ಮೇ 01) ಮಧ್ಯಾಹ್ನ ಸಿಐಡಿ ಕಚೇರಿಗೆ ತೆರಳಿ 7 ದಿನ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದೇನೆ. ಆದ್ರೆ, ತನಿಖಾಧಿಕಾರಿಗಳಿಂದ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಎಸ್​ಐಟಿ ಅಧಿಕಾರಿಗಳು 7 ದಿನ ಸಮಯ ನೀಡುವ ವಿಶ್ವಾಸವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಶ್ಲೀಲ ವಿಡಿಯೋಗಳು ವೈರಲ್ ಆಗುತ್ತಿರುವುದರಿಂದ ಹಾಸನ ಲೋಕಸಭಾ ಕ್ಷೇತ್ರದ ಮತದಾನ ಮುಗಿಯುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ರಾತ್ರೋರಾತ್ರಿ ಜರ್ಮಿನಿಗೆ ಹಾರಿದ್ದು, ನಾಡಿದ್ದು ಅಂದರೆ ಮೇ 3ಕ್ಕೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಬಳಿಕ ವಕೀಲರ ಜೊತೆ ಚರ್ಚಿಸಿ ಎಸ್​ಐಟಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎನ್ನಲಾಗಿದೆ.

ಲುಪ್ತಾನ್ಸಾ ಏರ್​ಲೈನ್ಸ್​ ಮೂಲಕ ಬೆಂಗಳೂರಿಗೆ

ವಿಡಿಯೋ ವೈರಲ್ ಬೆನ್ನಲ್ಲೇ ಜರ್ಮನಿಗೆ ಹಾರಿರುವ ಪ್ರಜ್ವಲ್, ಶುಕ್ರವಾರ (ಮೇ 03)ರ ಮಧ್ಯರಾತ್ರಿ ರಾಜ್ಯಕ್ಕೆ ಮರಳಲಿದ್ದಾರೆ. ಪ್ರಜ್ವಲ್​ ರೇವಣ್ಣ ಅವರು ಜರ್ಮನಿಯ ಫ್ರಾಂಕ್​ಫರ್ಟ್ (Germany) ತೆರಳಿದ್ದು, ಬೆಂಗಳೂರಿಗೆ ರಿಟರ್ನ್​ ಟಿಕೆಟ್ ಬುಕ್​ ಮಾಡಿದ್ದಾರೆ. ಮೇ3 ರಂದು ಮಧ್ಯಾಹ್ನ 1.30ಕ್ಕೆ ವಿಮಾನ ಫ್ರಾಂಕ್​ಫರ್ಟ್​ನಿಂದ ಹೊರಡಲಿದ್ದು,​​ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಲುಪ್ತಾನ್ಸಾ ಏರ್​ಲೈನ್ಸ್​ ಮೂಲಕ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (KIA) ಆಗಮಿಸಲಿದ್ದಾರೆ ತಿಳಿದುಬಂದಿದೆ.

Ads on article

Advertise in articles 1

advertising articles 2

Advertise under the article