1 ತಿಂಗಳ ಬಳಿಕ ಕೊನೆಗೂ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ! ಬಿಡುಗಡೆ ಮಾಡಿದ ವೀಡಿಯೋದಲ್ಲಿ ಏನೆಲ್ಲಾ ಹೇಳಿದ್ದಾರೆ ನೋಡಿ .....

1 ತಿಂಗಳ ಬಳಿಕ ಕೊನೆಗೂ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ! ಬಿಡುಗಡೆ ಮಾಡಿದ ವೀಡಿಯೋದಲ್ಲಿ ಏನೆಲ್ಲಾ ಹೇಳಿದ್ದಾರೆ ನೋಡಿ .....

ಬೆಂಗಳೂರು: ದೇಶವೇ ಬೆಚ್ಚಿಬೀಳಿಸೋ ಬಹುದೊಡ್ಡ ಲೈಂಗಿಕ ಹಗರಣದ ಆರೋಪ ಹೊತ್ತು ದೇಶಾಂತರ ಮಾಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದೀಗ ಒಂದು ತಿಂಗಳ ಬಳಿಕ ವೀಡಿಯೋ ಹೇಳಿಕೆ ಮೂಲಕ ಪ್ರತ್ಯಕ್ಷವಾಗಿದ್ದಾರೆ. 

ನಿಗೂಢ ಸ್ಥಳದಿಂದಲೇ ವೀಡಿಯೋ ಮಾಡಿರುವ ಪ್ರಜ್ವಲ್ ಇದೆಲ್ಲವು ಸುಳ್ಳು ಕೇಸ್, ರಾಜಕೀಯ ಶಡ್ಯಂತ್ರ ಎಂದು ತಮ್ಮ ವಿರುದ್ದದ ಆರೋಪವನ್ನು ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಅಲ್ಲದೇ ಪ್ರಜ್ವಲ್ ಮೇ 31ರ ಶುಕ್ರವಾ್ರ ಬೆಳಿಗ್ಗೆ 10 ಗಂಟೆಗೆ ಎಸ್ ಐಟಿ ಎದುರು ಹಾಜರಾಗ್ತೇನೆ, ಕಾನೂನಿನ ಮೂಲಕವೇ ಆರೋಪಗಳನ್ನ ಎದುರಿಸುತ್ತೇನೆ ಎಂದು ಸಮಜಾಯಿಷಿ ನೀಡಿದ್ದಾರೆ. 

ವಿದೇಶದಲ್ಲಿದ್ದುಕೊಂಡೇ ವಿಡಿಯೋ ಬಿಡುಗಡೆ ಮಾಡಿರುವ ಪ್ರಜ್ವಲ್ ರೇವಣ್ಣ, "ನಾನು ವಿದೇಶಕ್ಕೆ ತೆರಳುವುದು ಏ.26 ರಂದೇ ಪೂರ್ವನಿಗದಿಯಾಗಿತ್ತು" ಎಂದು ಹೇಳಿದ್ದಾರೆ.

ಇದೇ ವೇಳೆ ಮೇ.31 ಕ್ಕೆ ಎಸ್ ಐ ಟಿ ಎದುರು ಹಾಜರಾಗುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಇದೇ ವೇಳೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಪತ್ರ, ಕುಮಾರಸ್ವಾಮಿ ಅವರ ಮನವಿಯ ಬಗ್ಗೆಯೂ ಪ್ರತಿಕ್ರಿಯೆ ನೀಡಿರುವ ಪ್ರಜ್ವಲ್ ರೇವಣ್ಣ, ತಂದೆ-ತಾಯಿ, ತಾತನಿಗೆ ಕ್ಷಮೆಕೋರುತ್ತೇನೆ, ಜನತೆ, ಜೆಡಿಎಸ್ ಕಾರ್ಯಕರ್ತರಿಗೂ ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ.

ನನಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ನ್ಯಾಯಾಂಗದ ಮೂಲಕ ನನ್ನ ವಿರುದ್ಧದ ಸುಳ್ಳು ಆರೋಪಗಳಿಂದ ಮುಕ್ತನಾಗುತ್ತೇನೆ ಎಂದು ಪ್ರಜ್ವಲ್ ರೇವಣ್ಣ ವಿಡಿಯೋ ಸಂದೇಶದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೇ 31 ರಂದು ಖಂಡಿತವಾಗಿಯೂ ಎಸ್ ಐಟಿ ಎದುರು ಹಾಜರಾಗುತ್ತೇನೆ, ನನ್ನನ್ನು ನಂಬಿ. ನನ್ನ ಮೇಲೆ ದೇವರು, ಜನತೆ, ಕುಟುಂಬದವರ ಆಶೀರ್ವಾದವಿರಲಿ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಏ.27 ರಂದು ಜರ್ಮನಿಗೆ ತೆರಳಿದ್ದರು. ಎಸ್‌ಐಟಿ ಕೋರಿಕೆಯ ಮೇರೆಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮೂಲಕ ಇಂಟರ್‌ಪೋಲ್ ಈಗಾಗಲೇ ಆತನ ಇರುವಿಕೆಯ ಕುರಿತು ಮಾಹಿತಿ ಕೋರಿ 'ಬ್ಲೂ ಕಾರ್ನರ್ ನೋಟಿಸ್' ಜಾರಿ ಮಾಡಿದೆ. ಎಸ್‌ಐಟಿ ಸಲ್ಲಿಸಿದ ಅರ್ಜಿಯ ಮೇರೆಗೆ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೇ 18 ರಂದು ಪ್ರಜ್ವಲ್ ರೇವಣ್ಣ ವಿರುದ್ಧ ಬಂಧನ ವಾರಂಟ್ ಹೊರಡಿಸಿತು.

ಇತ್ತೀಚೆಗೆ ಬಹಿರಂಗ ಪತ್ರ ಪ್ರಕಟಿಸಿದ್ದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಪ್ರಜ್ವಲ್ ರೇವಣ್ಣಗೆ ಎಚ್ಚರಿಕೆ ನೀಡಿ, "ನನ್ನ ತಾಳ್ಮೆ ಪರೀಕ್ಷಿಸಬೇಡ ಕೂಡಲೇ ಎಸ್ ಐಟಿ ತನಿಖೆಗೆ ಹಾಜರಾಗು ಎಂದು ಹೇಳಿದ್ದರು.

Ads on article

Advertise in articles 1

advertising articles 2

Advertise under the article