ಅಶ್ಲೀಲ ವಿಡಿಯೋ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪಿ  ಪ್ರಜ್ವಲ್ ಬಂಧನ

ಅಶ್ಲೀಲ ವಿಡಿಯೋ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪಿ ಪ್ರಜ್ವಲ್ ಬಂಧನ

ಚಿಕ್ಕಮಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪಿಯನ್ನು ಕುದುರೆಮುಖ ಠಾಣೆ ಪೊಲೀಸರು ಬಂಧಿಸಿದ್ದಾರೆ. 

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಮಧ್ಯೆ ಪ್ರಜ್ವಲ್ ರೇವಣ್ಣರ ವಿಡಿಯೋ ಮತ್ತು ಫೋಟೋಗಳನ್ನು ಅಪ್ಲೋಡ್ ಮಾಡಿದ್ದ ಟ್ರೋಲ್ ಪೇಜ್ ಅಡ್ಮಿನ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಕುದುರೆಮುಖ ಠಾಣೆ ಪೊಲೀಸರು ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಪ್ರಜ್ವಲ್, ಪ್ರಜ್ವಲ್​ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್​ನಲ್ಲಿ ಅಪ್ಲೋಡ್​ ಮಾಡಿದ್ದನು.

ಈ ಸಂಬಂಧ ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್​ 67,67 (ಎ) ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪ್ರಜ್ವಲ್​ ಟ್ರೋಲ್ ಪೇಜ್ ಅಡ್ಮಿನ್ ಸಹ ಆಗಿದ್ದಾನೆ.

Ads on article

Advertise in articles 1

advertising articles 2

Advertise under the article