![ಉಡುಪಿಯ ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಇಬ್ಬರ ಬಂಧನ, ಹೊಡೆದಾಟದ ವಿಡಿಯೋ ವೈರಲ್ ಉಡುಪಿಯ ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಇಬ್ಬರ ಬಂಧನ, ಹೊಡೆದಾಟದ ವಿಡಿಯೋ ವೈರಲ್](https://blogger.googleusercontent.com/img/b/R29vZ2xl/AVvXsEjJfUeOV8NE7A_MzL7foCig399q1iB3PXfi_8LYmdyD2JO7uVwaVYk1iG7v33I1uNncFYTeESEmpWsatxS6nrj3ZpiIwW6kpBe7MUl8AKG9BnmfR-QlKWOinfLuUzg4LihXGvx9x4PpeGM7I0XCQ3ClnHDq-kKTuK0uCQsyl1w1dzk7QbDpeMS7y4t3hJaw/w640-h606/udupi.jpg)
ಉಡುಪಿಯ ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಇಬ್ಬರ ಬಂಧನ, ಹೊಡೆದಾಟದ ವಿಡಿಯೋ ವೈರಲ್
Saturday, May 25, 2024
ಉಡುಪಿ: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ (169ಎ) ಯ ನಡು ರಸ್ತೆಯಲ್ಲಿಯೇ ಗ್ಯಾಂಗ್ ವಾರ್ ನಡೆದಿದೆ. ಮೇ 18ರಂದು ಈ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಇದರ ಆಧಾರದ ಮೇಲೆ ಪೊಲೀಸರು ಮೇ 20ರಂದು ಪ್ರಕರಣ ದಾಖಲಿಸಿಕೊಂಡಿದ್ದರು.
ಅದರಂತೆ ಪ್ರಕರಣಕ್ಕೆ ಸಂಬಂಧಿಸಿ ಕಾಪುವಿನ ಗರುಡ ಗ್ಯಾಂಗಿನ ಆಶಿಕ್ ಮತ್ತು ರಕೀಬ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ನಲ್ಲಿದ್ದ ಉಳಿದವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
ಕೃತ್ಯಕ್ಕೆ ಬಳಸಿದ ಎರಡು ಸ್ವಿಫ್ಟ್ ಕಾರುಗಳು ಮತ್ತು ಎರಡು ಬೈಕ್ಗಳು, ಒಂದು ತಲ್ವಾರ್ ಮತ್ತು ಒಂದು ಡ್ರ್ಯಾಗರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.