
ಬಿಜೆಪಿ ಹಿಂದೂ- ಮುಸ್ಲಿಂರ ನಡುವೆ ವಿಷ ಬೀಜ ಬಿತ್ತಿ ಸಮಾಜದಲ್ಲಿ ಬಿರುಕು ಮೂಡಿಸುತ್ತಿದೆ: ನಟ ದುನಿಯಾ ವಿಜಯ್
Wednesday, May 1, 2024
ಉಡುಪಿ: ಬಿಜೆಪಿಯವರು ಹಿಂದೂ- ಮುಸ್ಲಿಂರ ನಡುವೆ ವಿಷ ಬೀಜ ಬಿತ್ತಿ ಸಮಾಜದಲ್ಲಿ ಬಿರುಕು ಮೂಡಿಸುತ್ತಿದ್ದಾರೆ. ಆದ್ದರಿಂದ, ಕೈ ಮುಗಿದು ಕೇಳಿಕೊಳ್ಳುತ್ತೇನೆ. ಅದಕ್ಕೆ ಅವಕಾಶ ಕಲ್ಪಿಸಿಕೊಡಬೇಡಿ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ನಟ ದುನಿಯಾ ವಿಜಯ್ ಹೇಳಿದರು.
ಬೈಂದೂರು ತಾಲ್ಲೂಕಿನ ಕಿರಿಮಂಜೇಶ್ವರದಲ್ಲಿ ಆಯೋಜಿಸಿದ್ದ ಮಹಿಳಾ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದಲ್ಲಿ ಹಿಂದೂ- ಮುಸ್ಲಿಂ ಸಮುದಾಯದವರು ಹೊಡೆದಾಡಬೇಕು. ಆ ಪರಿಸ್ಥಿತಿಯನ್ನು ಬಿಜೆಪಿಯವರು ನಿರ್ಮಾಣ ಮಾಡುತ್ತಿದ್ದಾರೆ. ಅದಕ್ಕೆ ಆಸ್ಪದ ಕೊಡಕೂಡದು ಎಂದರು.
ನಟ ಶಿವರಾಜಕುಮಾರ ಮಾತನಾಡಿ, ಮಾನವೀಯತೆಯ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು. ಬಡವರ ಸಮಸ್ಯೆಗಳಿಗೆ ನೆರವಾಗಲಿ ಎನ್ನುವ ಉದ್ದೇಶದಿಂದ ಸರ್ಕಾರವನ್ನು ಆಯ್ಕೆ ಮಾಡುವುದು. ಇಲ್ಲಿ ಕೇವಲ ಭರವಸೆಗಳಿಗೆ ಮರಳಾಗಕೂಡದು. ಇಲ್ಲಿ ಸೇವೆ ಸಲ್ಲಿಸಲು ಗೀತಾಗೆ ಅವಕಾಶ ಕಲ್ಪಿಸಿಕೊಡಿ ಎಂದರು.