
ಕುಂದಾಪುರ: ಚಲಿಸುತ್ತಿದ್ದ ಟ್ರಕ್ ನ ಚಕ್ರದಡಿಗೆ ಸಿಲುಕಿದ ಸ್ಕೂಟರ್: ಅದೃಷ್ಟವಶಾತ್ ತಾಯಿ ಮಗಳು ಅಪಾಯದಿಂದ ಪಾರು
Monday, June 24, 2024
ಉಡುಪಿ: ಚಲಿಸುತ್ತಿದ್ದ ಟ್ರಕ್ ನ ಚಕ್ರದಡಿಗೆ ಸ್ಕೂಟರ್ ವೊಂದು ಸಿಲುಕಿದ ಘಟನೆ ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಸಂಗಮ ಜಂಕ್ಷನ್ ಬಳಿ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ತಾಯಿ ಮತ್ತು ಮಗಳು ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡವರನ್ನು ರೋಸಿ ಮತ್ತು ಆಕೆಯ ಮಗಳು ರೆನಿಸ್ ಎಂದು ಗುರುತಿಸಲಾಗಿದೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರಕ್ ಹರಿಯಾಣದಿಂದ ಕೊಝಿಕೋಗೆ ತೆರಳುತ್ತಿತ್ತು. ಡಿಕ್ಕಿಯ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಈ ಸಂಬಂಧ ಕುಂದಾಪುರ ಸಂಚಾರ ಪೊಲೀಸರು ಪ್ರಕರಣ ದಾಖಲಾಗಿದೆ.