ಹತ್ಯೆ ಪ್ರಕರಣ; ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ
Tuesday, June 11, 2024
ಬೆಂಗಳೂರು: ಕೊಲೆ ಪ್ರಕರಣದ ಆರೋಪದಲ್ಲಿ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರನ್ನು ಬಂಧಿಸಲಾಗಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ನಟ ದರ್ಶನ್ನನ್ನು ಅರೆಸ್ಟ್ ಮಾಡಿದ್ದು ವಿಚಾರಣೆ ನಡೆಸಲಾಗುತ್ತಿದೆ.
ಇಂದು ಮುಂಜಾನೆ ಮೈಸೂರಿನಲ್ಲಿ ನಟ ದರ್ಶನ್ ವಶಕ್ಕೆ ಪಡೆದಿರುವ ಪೊಲೀಸರು, ಸದ್ಯ ಮೈಸೂರಿನಿಂದ ಬೆಂಗಳೂರಿಗೆ ಕರೆತರುತ್ತಿದ್ದಾರೆ. ಕೊಲೆ ಕೇಸ್‌ನಲ್ಲಿ ಆರೋಪಿಯ ಜೊತೆ ನಿರಂತರ ಸಂಪರ್ಕದ ಇರೋದು ಗೊತ್ತಾಗಿದೆ. ಆರೋಪಿಯ ವಿಚಾರಣೆ ವೇಳೆಯೂ ನಟ ದರ್ಶನ್ ಹೆಸರು ಬಾಯಿಬಿಟ್ಟಿದ್ದ ಎನ್ನಲಾಗಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ ಅಅವರನ್ನು ಬಂಧಿಸಲಾಗಿದೆ.