ಕಮಲಶಿಲೆ ಗೋಶಾಲೆಯಲ್ಲಿ ಗೋವು ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

ಕಮಲಶಿಲೆ ಗೋಶಾಲೆಯಲ್ಲಿ ಗೋವು ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

ಉಡುಪಿ: ಕುಂದಾಪುರ ತಾಲೂಕಿನ ಕಮಲಶಿಲೆ ದೇವಸ್ಥಾನದ ಗೋಶಾಲೆಯಲ್ಲಿ ಗೋವು ಕಳ್ಳತನ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. 

ಮಂಗಳೂರಿನ ಬಜ್ಪೆ ನಿವಾಸಿಗಳಾದ ವಾಜೀದ್ ಜೆ (26) ಹಾಗೂ ಫೈಜಲ್ (40) ಬಂಧಿತ ಆರೋಪಿಗಳು. ಈ ಇಬ್ಬರು ಆರೋಪಿಗಳು ಜೂನ್ 16ರಂದು ಮುಂಜಾನೆ 2:30ಕ್ಕೆ ಗೋಶಾಲೆಗೆ ನುಗ್ಗಿ ಗೋವು ಕಳ್ಳತನಕ್ಕೆ ಯತ್ನಿಸಿದ್ದರು. ಈ ವೇಳೆ ತಕ್ಷಣವೇ ಎಚ್ಚೆತ್ತುಗೊಂಡ ದೇವಸ್ಥಾನದ ಭದ್ರತಾ ಸಿಬ್ಬಂದಿ ಗೋಶಾಲೆಗೆ ಬಂದಿದ್ದು, ಇದನ್ನು ಗಮನಿಸಿದ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ಗೋಕಳ್ಳರ ಕೈಚಳಕ ಗೋಶಾಲೆಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿತ್ತು. ಕಾರ್ಯಾಚರಣೆಗೆ ಇಳಿದ ಪೊಲೀಸರು ಜೂನ್ 22ರಂದು ಇಬ್ಬರನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ  ಹುಂಡೈ ಕ್ರೆಟಾ ಕಾರನ್ನು  ಸ್ವಾಧೀನಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Ads on article

Advertise in articles 1

advertising articles 2

Advertise under the article