
ಇಂದು ಸಂಜೆ 7-15ಕ್ಕೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಮೋದಿ; ಗಾಂಧಿ-ವಾಜಪೇಯಿ ಸಮಾಧಿಗೆ ಗೌರವ
Sunday, June 9, 2024
ನವದೆಹಲಿ: ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಇಂದು ರಾತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 7-15ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಬಾಂಗ್ಲಾ ದೇಶದ ಪ್ರಧಾನಿ ಶೇಕ್ ಹಸೀನಾ ಸೇರಿದಂತೆ ಹಲವು ದೇಶಗಳ ಗಣ್ಯರು ಈಗಾಗಲೇ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ಮೋದಿ ಅವರು ಇಂದು ಬೆಳಗ್ಗೆ ಮಹಾತ್ಮ ಗಾಂಧಿ ಮತ್ತು ವಾಜಪೇಯಿ ಸಮಾಧಿ ಬಳಿಗೆ ತೆರಳಿ ಗೌರವ ವಂದನೆ ಸಲ್ಲಿಸಿದರು.
ಮೊದಲಿಗೆ ರಾಜಘಾಟ್ ಗೆ ತೆರಳಿ, ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಗೌರವ ವಂದನೆ ಸಲ್ಲಿಸಿದ ಮೋದಿ, ತದನಂತರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗೆ ತೆರಳಿ ಗೌರವ ವಂದನೆ ಸಲ್ಲಿಸಿದರು.
ರಾಷ್ಯ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ಮೋದಿ, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. ಮೂರು ಸೇನಾಪಡೆಗಳು ಮುಖ್ಯಸ್ಥರು ಮೋದಿ ಅವರಿಗೆ ಸಾಥ್ ನೀಡಿದರು.