ಜೂನ್ 15ರಂದು ಉಡುಪಿಯ ಮಿಶನ್ ಆಸ್ಪತ್ರೆಯಲ್ಲಿ 'ಇನ್ಸ್ಪಾಯರ್' ಗ್ರೀನ್ ಹಾಸ್ಪಿಟಲ್ ಯೋಜನೆಗೆ ಚಾಲನೆ

ಜೂನ್ 15ರಂದು ಉಡುಪಿಯ ಮಿಶನ್ ಆಸ್ಪತ್ರೆಯಲ್ಲಿ 'ಇನ್ಸ್ಪಾಯರ್' ಗ್ರೀನ್ ಹಾಸ್ಪಿಟಲ್ ಯೋಜನೆಗೆ ಚಾಲನೆ

ಉಡುಪಿ: ಕಳೆದ ಒಂದು ಶತಮಾನದಿಂದ ಉಡುಪಿ ಪರಿಸರದ ಆರೋಗ್ಯ ರಕ್ಷಣೆಯ ಮೂಲಾಧಾರವಾಗಿದ್ದ ಸಿಎಸ್‌ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ, ಇದೀಗ 'ಇನ್ಸ್ ಪಾಯರ್' ಗ್ರೀನ್ ಹಾಸ್ಪಿಟಲ್ ಯೋಜನೆಯನ್ನು ಆರಂಭಿಸುವುದರೊಂದಿಗೆ ಹವಾಮಾನ ಬದಲಾವಣೆಯನ್ನು ನೀಗಿಸುವ ಪ್ರಕ್ರಿಯೆಗೆ ಮುಂದಾಗಿದೆ. ಇನ್ಸ್ ಪಾಯರ್ ಯೋಜನೆಗೆ ಇದೇ ಜೂನ್ 15ರಂದು ಬೆಳಿಗ್ಗೆ 11ಗಂಟೆಗೆ ಆಸ್ಪತ್ರೆ ಆವರಣದಲ್ಲಿ ನಡೆಯಲಿರುವ ಸಂಸ್ಥೆಯ 101 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಚಾಲನೆ ಸಿಗಲಿದೆ. 

ಈ ಕುರಿತು ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಿಷನ್ ಆಸ್ಪತ್ರೆಯ ನಿರ್ದೇಶಕ ಡಾ.ಸುಶಿಲ್ ಜತನ್ನ ಮಾಹಿತಿ ನೀಡಿದರು.

ಸೌರ ಫಲಕಗಳ ಅಳವಡಿಕೆಯನ್ನು ಸಿಎಸ್‌ಐ ಕರ್ನಾಟಕ ದಕ್ಷಿಣ ಧರ್ಮಪ್ರಾಂತ್ಯದ ಬಿಷಪ್ ಹೇಮಚಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಈಶ್ವರ ಗಡಾದ್ ಭಾಗವಹಿಸಲಿದ್ದಾರೆ. ನಾಗಾಲ್ಯಾಂಡ್‌ನ ಸಂಗೀತಗಾರ ನೀಸೆ ಮೆರುನೊ ಮತ್ತು ಸಿಎಸ್‌ಐ ಏರಿಯಾ ಚೇರ್ಮನ್ ಐವನ್ ಡಿ.ಸೋನ್ಸ್ ಗೌರವ ಅತಿಥಿಗಳಾಗಿ ಆಗಮಿಸಲಿದ್ದಾರೆ‌ ಎಂದರು.

ಸುದ್ದಿಗೋಷ್ಠಿಯಲ್ಲಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಗಣೇಶ್ ಕಾಮತ್, ಆಡಳಿತಾಧಿಕಾರಿ ಡೀನಾ ಪ್ರಭಾವತಿ, ಪಿಆರ್ ಒ ರೋಹಿ ರತ್ನಾಕರ್ ಇದ್ದರು

Ads on article

Advertise in articles 1

advertising articles 2

Advertise under the article