ಉಡುಪಿ ಹಾಶಿಮಿ ಮಸೀದಿಯಲ್ಲಿ ಈದ್ ಅಲ್ ಅದ್ಹಾ ಹಬ್ಬ ಆಚರಣೆ

ಉಡುಪಿ ಹಾಶಿಮಿ ಮಸೀದಿಯಲ್ಲಿ ಈದ್ ಅಲ್ ಅದ್ಹಾ ಹಬ್ಬ ಆಚರಣೆ

ಉಡುಪಿ ನಾಯರ್‌ಕೆರೆಯ ಹಾಶಿಮಿ ಮಸೀದಿಯಲ್ಲಿ ಶಾಂತಿ, ಪ್ರೀತಿ, ಸೌಹಾರ್ದತೆ ಸಾರುವ ಈದ್ ಹಬ್ಬವನ್ನು ಆಚರಿಸಲಾಯಿತು.  

ಈದ್ ನಮಾಝ್ ನೇತೃತ್ವವನ್ನು ಮೌಲಾನಾ ಒಬೈದುರ್ ರೆಹಮಾನ್ ನದ್ವಿ ವಹಿಸಿದ್ದರು, ಅವರು ಈದ್ ಅಲ್ ಅದಾಹ್ ಮಹತ್ವವನ್ನು ಎತ್ತಿ ತೋರಿಸಿದರು ಮತ್ತು ಸಮಾಜದಲ್ಲಿ ಪ್ರೀತಿ, ಶಾಂತಿ ಮತ್ತು ಸಾಮರಸ್ಯದ ಮಹತ್ವವನ್ನು ಒತ್ತಿ ಹೇಳಿದರು. 

ಈದ್ ನಮಾಜ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡು ಈದ್ ಶುಭಾಶಯ ವಿನಿಮಯ ಮಾಡಿಕೊಂಡರು.

Ads on article

Advertise in articles 1

advertising articles 2

Advertise under the article