ಅಸಹಜ ಲೈಂಗಿಕ ದೌರ್ಜನ್ಯ ಆರೋಪ: JDS MLC ಸೂರಜ್ ರೇವಣ್ಣ ಬಂಧನ; ಪ್ರಕರಣದ ತನಿಖೆ CID ಹೆಗಲಿಗೆ

ಅಸಹಜ ಲೈಂಗಿಕ ದೌರ್ಜನ್ಯ ಆರೋಪ: JDS MLC ಸೂರಜ್ ರೇವಣ್ಣ ಬಂಧನ; ಪ್ರಕರಣದ ತನಿಖೆ CID ಹೆಗಲಿಗೆ

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ JDS MLC ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರ ಬಂಧಿಸಿದ್ದಾರೆ.

ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್‌.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ಬಂಧನವಾಗಿದೆ.

ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಜ್ವಲ್‌ ಸಹೋದರ, ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಅವರನ್ನು ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ.

ನಿನ್ನೆ ರಾತ್ರಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರವಾಗಿ ಹೊಳೆ ನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ಪ್ರಕರಣದ ಸಂಬಂಧ ಸೂರಜ್‌ ರೇವಣ್ಣ ಅವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳ ಪಡಿಸಿದರು.

ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ತಡರಾತ್ರಿವರೆಗೂ ವಿಚಾರಣೆ ನಡೆಯಿತು. ಭಾನುವಾರ ಮುಂಜಾನೆ 4 ಗಂಟೆವರೆಗೂ ಸೂರಜ್‌ನನ್ನು ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು.

ವಿಚಾರಣೆ ಸಿಐಡಿ ತನಿಖೆಗೆ...

ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಪ್ರಕರಣದ ವಿಚಾರಣೆಯನ್ನು ಸಿಐಡಿ ತನಿಖೆಗೆ ವಹಿಸಿ ಆದೇಶಿಸಿಲಾಗಿದೆ.

ತನಿಖಾಧಿಕಾರಿಯಾಗಿರುವ ಸಕಲೇಶಪುರ ಡಿವೈಎಸ್ಪಿ ಪ್ರಮೋದ್ ಕು‌ಮಾರ್, ಸೂರಜ್ ಅವರನ್ನು ಬಂಧಿಸಿ, ಶನಿವಾರ ರಾತ್ರಿ 7.30 ರ ಹೊತ್ತಿಗೆ ಹಾಸನದ ಸಿಇಎನ್ ಪೊಲೀಸ್ ಠಾಣೆಗೆ ಕರೆತಂದಿದ್ದರು. ಸಂತ್ರಸ್ತ ನೀಡಿರುವ ದೂರು ಹಾಗೂ ಸೂರಜ್ ಆಪ್ತ ನೀಡಿರುವ ದೂರುಗಳ ಪ್ರತ್ಯೇಕ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದಾರೆ.

ಸಂತ್ರಸ್ತನನ್ನು ವೈದ್ಯಕೀಯ ಪರೀಕ್ಷೆಗಾಗಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದ ಪೊಲೀಸರು ವೈದ್ಯಕೀಯ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.


Ads on article

Advertise in articles 1

advertising articles 2

Advertise under the article