ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್ ನ 7 ಅಭ್ಯರ್ಥಿಗಳ ಪಟ್ಟಿ ಪ್ರಕಟ: ಯತೀಂದ್ರ ಸಿದ್ದರಾಮಯ್ಯ, ಬಿಲ್ಕಿಸ್ ಬಾನೊ ಸ್ಪರ್ಧೆ!

ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್ ನ 7 ಅಭ್ಯರ್ಥಿಗಳ ಪಟ್ಟಿ ಪ್ರಕಟ: ಯತೀಂದ್ರ ಸಿದ್ದರಾಮಯ್ಯ, ಬಿಲ್ಕಿಸ್ ಬಾನೊ ಸ್ಪರ್ಧೆ!

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 7 ಮಂದಿ ಸ್ಪರ್ಧಾ ಕಣದಲ್ಲಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದಿದ್ದು ಇದರ ಆಧಾರದ ಮೇಲೆ ಒಟ್ಟು 11ರಲ್ಲಿ ಏಳು ಸ್ಥಾನಗಳನ್ನು ಕಾಂಗ್ರೆಸ್​ ಗೆಲ್ಲುವ ಅವಕಾಶವಿದ್ದು ಆ ಸ್ಥಾನಗಳಿಗೆ ಇದೀಗ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.

ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಕಾರ್ಯದರ್ಶಿ ಡಾ.ಕೆ ಗೋವಿಂದರಾಜು, ವಸಂತಕುಮಾರ್, ಜಗದೇವ್ ಗುತ್ತೇದಾರ್, ಐವನ್ ಡಿಸೋಜಾ ಮತ್ತು ಬಿಲ್ಕಿಸ್ ಬಾನೊ ಅವರನ್ನು ಕಾಂಗ್ರೆಸ್​ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ. ಇನ್ನು ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಬಸನಗೌಡ ಬಾದರ್ಲಿ ಅವರನ್ನ ಆಯ್ಕೆ ಮಾಡಿದೆ.

ಉಪಚುನಾವಣೆಗೂ ಅಭ್ಯರ್ಥಿ ಘೋಷಣೆ

ಕಾಂಗ್ರೆಸ್ ಏಳು ಪರಿಷತ್​ ಸ್ಥಾನಗಳಿಗೆ ಮಾತ್ರವಲ್ಲದೇ ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್​ ಸ್ಥಾನಕ್ಕೂ ಅಭ್ಯರ್ಥಿಯನ್ನು ಘೋಷಿಸಿದೆ. ಮುಂಬರುವ ಉಪಚುನಾವಣೆಗೆ ಮಾಜಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ ಅವರನ್ನು ಆಯ್ಕೆ ಮಾಡಿದೆ.

Ads on article

Advertise in articles 1

advertising articles 2

Advertise under the article