ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ; ಇಬ್ಬರು ಬಲಿ; ಸೈಟ್ ವಿಚಾರಕ್ಕೆ ನಡೆಯಿತೇ ಕೃತ್ಯ
ಹಾಸನ: ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಯುವಕರು ಬಲಿಯಾಗಿದ್ದಾರೆ. ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಗುರುವಾರ ಗುಂಡಿನ ದಾಳಿ ನಡೆದಿದೆ.
ಹಾಸನದ ಶರಫತ್ ಅಲಿ ಹಾಗು ಬೆಂಗಳೂರಿನ ಆಶಿಫ್ ಮೃತರಾಗಿದ್ದಾರೆ. ಸ್ಥಳಕ್ಕೆ ಶರಫತ್ ಅಲಿ ಪತ್ನಿ ಆಗಮಿಸಿದ್ದಾರೆ. ನಿವೇಶನ ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆ ನಡೆಯುತಿತ್ತು. ಈ ವಿಚಾರದ ಬಗ್ಗೆ ಇಂದು ಮಾತುಕತೆ ನಡೆಸಲು ಬಂದಾಗ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ಹತ್ಯೆಯಲ್ಲಿ ಅಂತ್ಯವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಮಧ್ಯಾಹ್ನ12:30ರ ವೇಳೆಗೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಎಸ್‌ಪಿ ಮೊಹಮದ್ ಸುಜೇತಾ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಎಫ್‌ಎಸ್‌ಎಲ್ ತಂಡ ಭೇಟಿ ನೀಡಿದೆ.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಎಸ್‌ಪಿ ಮೊಹಮದ್ ಸುಜೇತಾ, ಇಬ್ಬರು ವ್ಯಕ್ತಿಗಳು ಸ್ಥಳದಲ್ಲಿ ಮಾತನಾಡುತ್ತಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ. ಒಬ್ಬರು ಶೂಟ್ ಮಾಡಿ, ಇನ್ನೊಬ್ಬರು ತಾನೇ ಶೂಟ್ ಮಾಡ ಹತ್ಯೆ ಮಾಡಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಇದು ಪ್ರಾಥಮಿಕ ಮಾಹಿತಿ. ಸದ್ಯಕ್ಕೆ ಕಾರಿನ ಒಳಗಡೆ ಒಂದು ವೆಪನ್ ಸಿಕ್ಕಿದೆ. ಎಂದು ಹೇಳಿದರು.