ಕಣ್ಣೂರು ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ಹಾಜಿ ಎಸ್. ಮೊಹಮ್ಮದ್, ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಉಮರಬ್ಬ ಆಯ್ಕೆ
Monday, June 10, 2024
ಮಂಗಳೂರು: ಕಣ್ಣೂರು ಆಂಗ್ಲ ಮಾಧ್ಯಮ ಶಾಲೆ ಮತ್ತು ಗರ್ಲ್ಸ್ ಪಿ.ಯು. ಕಾಲೇಜಿನ ಆಡಳಿತ ಸಂಸ್ಥೆಯಾಗಿರುವ ಕಣ್ಣೂರು ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ಹಾಜಿ ಎಸ್.ಮೊಹಮ್ಮದ್ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಕೆ.ಬಿ.ಅಬ್ದುಲ್ ರಹಿಮಾನ್, ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಉಮರಬ್ಬ, ಕೋಶಾಧಿಕಾರಿ ಇಬ್ರಾಹೀಂ ಶೌಕತ್, ಜೊತೆ ಕಾರ್ಯದರ್ಶಿ ಸಿತಾರ್ ಅಬ್ದುಲ್ ಮಜೀದ್, ಟ್ರಸ್ಟಿಗಳಾಗಿ ಹೈದರ್ ಅಲಿ, ಬಿ. ಮೊಹಮ್ಮದ್, ಅಬ್ದುಲ್ ಹಮೀದ್, ಹಾಜಿ ಅಬ್ದುಲ್ ಕರೀಮ್ ಶಿರಸಿ, ಝೊಹರಾ ಆಯ್ಕೆಗೊಂಡರು.
ಈ ಶಾಲೆಯಲ್ಲಿ ಸುಮಾರು 750 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ. 100 ಫಲಿತಾಂಶ ಬಂದಿದೆ. ಕಳೆದ 28 ವರ್ಷಗಳಿಂದ ಈ ಶಿಕ್ಷಣ ಸಂಸ್ಥೆ ಕಾರ್ಯಾಚರಿಸುತ್ತಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸುಶಿಕ್ಷಿತರಾಗಲು ಈ ಸಂಸ್ಥೆಯು ಸಹಕಾರಿಯಾಗಿದೆ ಎಂದು ಪ್ರಕಟನೆ ತಿಳಿಸಿದೆ.