ಉಡುಪಿ : ಈ ಬಾರಿಯ ಲೋಕಸಭಾ ಚುನಾವಣೆಯ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ಸಿನ ಜಯ ಪ್ರಕಾಶ್ ಹೆಗ್ಡೆ ಅವರು ಸೋಲು ಕಂಡಿದ್ದು, ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಗೆಲುವಿನ ನಗೆ ಬೀರಿದ್ದಾರೆ. ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಕೋಟ ಶ್ರೀನಿವಾಸ್ ಪೂಜಾರಿ ಅವರು ಗೆಲುವಿನ ನಗೆ ಬೀರಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಅವರನ್ನು ಮೇಲಕ್ಕೆತ್ತಿ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.
ಈ ಸಂದರ್ಭ ಶಾಸಕರಾದ ಯಶ್ ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮೊದಲಾದವರು ಹಾಜರಿದ್ದರು.
